ದಸರಾ ಮಹೋತ್ಸವ: ಸೆ.20ರಂದು ಸಿಂಹಾಸನ ಜೋಡಿಸುವ ಕಾರ್ಯ ಆರಂಭ
ಮೈಸೂರು, ಸೆ.13- ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಆಕರ್ಷಣೆಗಳ ದಾದ ಖಾಸಗಿ ದರ್ಬಾರ್ಗೆ ರತ್ನ ಖಚಿತ ಸಿಂಹಾಸನವನ್ನು ಜೋಡಿಸುವ ಕಾರ್ಯ ಸೆ.20ರಂದು ಆರಂಭವಾಗಲಿದೆ. ನವರಾತ್ರಿ ವೇಳೆ ರಾಜವಂಶಸ್ಥರು ನಡೆಸುವ ಖಾಸಗಿ ದರ್ಬಾರ್‍ನ ಸಿಂಹಾಸನಾರೋಹಣಕ್ಕೆ ಬಳಸುವ ರತ್ನ ಖಚಿತ ಸ್ವರ್ಣ ಸಿಂಹಾಸನವನ್ನು ಜಿಲ್ಲಾಡಳಿತದ ಅಧಿಕಾರಿಗಳು ಹಾಗೂ ರಾಜವಂಶಸ್ಥರ ಸಮ್ಮುಖದಲ್ಲಿ ಅರಮನೆಯ ನೆಲಮಾಳಿಗೆಯಲ್ಲಿನ ಭದ್ರತಾ ಕೊಠಡಿಯಿಂದ ಹೊರ ತೆರೆಯಲಾಗುತ್ತದೆ. ಅಂದು ಬೆಳಗ್ಗೆ 7 ರಿಂದ ಮಧ್ಯಾಹ್ನ 1ಗಂಟೆವರೆಗೆ ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ಅರಮನೆಯ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗುತ್ತದೆ. ಭದ್ರತಾ ಕೊಠಡಿಯಿಂದ […]
ವಿಶ್ವಪ್ರಸಿದ್ಧ ಜಂಬೂಸವಾರಿಗೆ ಗಜಪಡೆ ತಾಲೀಮು ಆರಂಭ
ಮೈಸೂರು,ಆ.14- ನಗರದ ಅರಮನೆ ಆವರಣದಿಂದ ಬನ್ನಿಮಂಟಪದವರೆಗೂ ಪ್ರತಿ ದಿನ ಬೆಳಗ್ಗೆ – ಸಂಜೆ ತಾಲೀಮು ನಡೆಸುವುದು ವಾಡಿಕೆ. ಅಂತೆಯೇ ಇಂದು ತಾಲೀಮು ಆರಂಭಕ್ಕೂ ಮುನ್ನ ಅರಮನೆ ಅವರಣದಲ್ಲಿ ಆನೆಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಕೋರೋನಾ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಅರಮನೆ ಆವರಣದಲ್ಲಿಯೇ ಆನೆಗಳ ತಾಲೀಮು ನಡೆಸಲಾಗಿತ್ತು. ಈ ಬಾರಿ ಎಂದಿನಂತೆ ಅರಮನೆಯಿಂದ ಬನ್ನಿ ಮಂಟಪದವರೆಗೆ ಗಜಪಡೆಗಳು ವಾಯುವಿಹಾರಕ್ಕೆ ತೆರಳುತ್ತಿದೆ. ಇಂದಿನಿಂದ ದಸರಾ ಗಜಪಡೆ ತಾಲೀಮು ಆರಂಭವಾಗಿದೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ 9 ಆನೆಗಳು ಅರಮನೆಯಿಂದ ಹೊರಟು […]