ಸಿಎಂ ಬೊಮ್ಮಾಯಿ ವಿರುದ್ದ ಕೇಸ್ ದಾಖಲಿಸುವಂತೆ ಸುರ್ಜೆವಾಲ ಒತ್ತಾಯ

ಬೆಂಗಳೂರು,ನ.26-ಮತದಾರರ ಪಟ್ಟಿ ಅಕ್ರಮ ಪ್ರಕರಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ದ ಪ್ರಕರಣ ದಾಖಲಿಸಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ ಒತ್ತಾಯಿಸಿದ್ದಾರೆ. ಕರ್ನಾಟಕದಲ್ಲಿನ ಮತದಾರರ ಪಟ್ಟಿಯ ಅಕ್ರಮಗಳ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು ಕಾಂಗ್ರೆಸ್ ವತಿಯಿಂದ ನೀಡಲಾದ ದೂರಿನ ಮೇಲೆ ಚುನಾವಣಾ ಆಯೋಗ ತ್ವರಿತ ಕ್ರಮ ಕೈಗೊಂಡಿರುವುದನ್ನು ಸ್ವಾಗತಿಸುತ್ತೇವೆ. ಆದರೆ ತನಿಖೆಯನ್ನು ಕೇವಲ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ ಎಂದು ಆಕ್ಷೇಪಿಸಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣೆ, ಮತದಾರರ […]

ಅಕ್ರಮದ ನಡುವೆಯೆ ‘ಚಿಲುಮೆ’ಯಿಂದ ಟೆಂಡರ್ ಲಾಬಿ

ಬೆಂಗಳೂರು, ನ.25- ಮತದಾರರ ಪಟ್ಟಿ ಅಕ್ರಮ ಪ್ರಕರಣದಲ್ಲಿ ಟೀಕೆಗೆ ಗುರಿಯಾಗಿರುವ ಚಿಲುಮೆ ಸಂಸ್ಥೆ ತನ್ನ ಮೇಲಿನ ಆರೋಪದ ಹೊರತಾಗಿಯೂ ಮತ್ತೊಂದು ಟೆಂಡರ್ ಪಡೆಯಲು ಲಾಬಿ ನಡೆಸಿರುವುದು ಬೆಳಕಿಗೆ ಬಂದಿದೆ.ಬಿಬಿಎಂಪಿ ವತಿಯಿಂದ ಬೀದಿಬದಿ ವ್ಯಾಪಾರಿಗಳ ಸಮೀಕ್ಷೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಕಲ್ಯಾಣ ಸಮಿತಿ ವಿಭಾಗ ಈ ಕುರಿತು ಟೆಂಡರ್ ಅನ್ನು ಆಹ್ವಾನಿಸಿದೆ. ಚಿಲುಮೆ ಸಂಸ್ಥೆ ಟೆಂಡರ್ ಗೆ ಬಿಡ್ ಸಲ್ಲಿಸಿದ್ದು, ಗುತ್ತಿಗೆ ಪಡೆದುಕೊಳ್ಳಲು ಹರಸಾಹಸ ನಡೆಸಿದೆ. ಬಿಬಿಎಂಪಿ ಮುಖ್ಯ ಆಯುಕ್ತರೂ ಸೇರಿದಂತೆ ಭಾರಿ ಪ್ರಭಾವ ಬಳಸಿ ಟೆಂಡರ್ ಗಿಟ್ಟಿಸುವ ಯತ್ನ […]

ವೋಟರ್ ಐಡಿ ಹಗರಣ: ರಾಜಕಾರಣಿಗಳ ಸಂಪರ್ಕದ ಬಗ್ಗೆ ಬಾಯಿ ಬಿಡದ `ಚಿಲುಮೆ’ ರವಿ

ಬೆಂಗಳೂರು,ನ.24- ಮತದಾರರ ಪಟ್ಟಿ ಅಕ್ರಮ ಪ್ರಕರಣದಲ್ಲಿ ಪೊಲೀಸರು ಚಿಲುಮೆ ಸಂಸ್ಥೆಯ ಮುಖ್ಯಸ್ಥ ರವಿಕುಮಾರ್ ಅವರನ್ನು ತೀವ್ರ ವಿಚಾರಣೆಗೊಳಪಡಿಸಿದ್ದು, ರಾಜಕೀಯ ಒತ್ತಡದ ಕಾರಣಕ್ಕಾಗಿ ತಾವು ದತ್ತಾಂಶಗಳನ್ನು ಸಂಗ್ರಹಿಸಿದ್ದಾಗಿ ಹೇಳಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಒತ್ತಡ ಹೇರಿದ ರಾಜಕಾರಣಿಗಳು ಯಾರು ಎಂಬ ವಿಷಯವನ್ನು ರವಿಕುಮಾರ್ ಬಾಯಿ ಬಿಡದೆ ಸತಾಯಿಸುತ್ತಿದ್ದಾರೆ. ತೀವ್ರ ಸಂಚಲನ ಮೂಡಿಸಿರುವ ಮತದಾರರ ಪಟ್ಟಿ ಅಕ್ರಮ ಪ್ರಕರಣದಲ್ಲಿ ರವಿಕುಮಾರ್ ಹೇಳಿಕೆಗಳು ಮಹತ್ವದಾಗಿದೆ. ಹೀಗಾಗಿ ಸಮಗ್ರ ಮಾಹಿತಿ ಕಲೆಹಾಕಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಆದರೆ ಬುದ್ದಿವಂತಿಕೆಯಿಂದ ವರ್ತಿಸುತ್ತಿರುವ ರವಿಕುಮಾರ್ ವಿಚಾರಣೆ ಸಂದರ್ಭದಲ್ಲಿ […]

ವೋಟರ್ ಐಡಿ ಹಗರಣಕ್ಕೆ ಮಹತ್ವದ ಟ್ವಿಸ್ಟ್..?!

ಬೆಂಗಳೂರು, ನ.22- ಮತದಾರರ ಪಟ್ಟಿ ಅಕ್ರಮಗಳ ಬಗ್ಗೆ ತನಿಖೆ ನಡೆಸುತ್ತಿರುವ ಹಲಸೂರು ಗೇಟ್ ಠಾಣೆ ಪೊಲೀಸರು ಎಲೆಕ್ಟ್ರಾನಿಕ್ ಡಿವೈಸ್‍ಗಳ ವಿಶ್ಲೇಷಣೆಗಳಿಂದ ಮತ್ತಷ್ಟು ಮಾಹಿತಿ ದೊರೆಯುವ ನಿರೀಕ್ಷೆಯಲ್ಲಿದ್ದು, ತನಿಖೆಗೆ ಮಹತ್ವದ ತಿರುವು ದೊರೆಯುವ ಸಾಧ್ಯತೆ ಇದೆ. ಅಕ್ರಮದ ಪ್ರಮುಖ ಆರೋಪಿ ಸ್ಥಾನದಲ್ಲಿರುವ ಚಿಲುಮೆ ಸಂಸ್ಥೆ ಸಾಫ್ಟ್‍ವೇರ್ ಇಂಜಿನಿಯರ್‍ಗಳಿಂದ ಸಮೀಕ್ಷಾ ಎಂಬ ಖಾಸಗಿ ಆಪ್ ಅಭಿವೃದ್ಧಿ ಪಡಿಸಿತು. ಅದರಲ್ಲಿ ಮತದಾರರ ಹೆಸರು, ಮೊಬೈಲ್ ಸಂಖ್ಯೆ, ಸಂಪರ್ಕ ವಿಳಾಸ, ಜಾತಿ, ಧರ್ಮ, ಉದ್ಯೋಗ ಸೇರಿದಂತೆ ಹಲವಾರು ಮಾಹಿತಿಗಳ ಕಾಲಂಗಳು ಅಡಕವಾಗಿದ್ದವು. ಚುನಾವಣಾ […]

ಮತ ಮಾಹಿತಿಗೆ ಕನ್ನ : ಆರೋಪ ಮುಚ್ಚಿಹಾಕುವ ಯತ್ನ ನಡೆದಿತ್ತೆ..?

ಬೆಂಗಳೂರು, ನ.22- ಮತದಾರರ ಪಟ್ಟಿ ಅಕ್ರಮ ಕುರಿತು ಕಳೆದ ಸೆಪ್ಟೆಂಬರ್‍ನಲ್ಲೇ ದೂರು ನೀಡಿದ್ದರೂ ಬಿಬಿಎಂಪಿ ಉದ್ದೇಶಪೂರ್ವಕವಾಗಿ ನಿರ್ಲಕ್ಷ್ಯತೆ ಪ್ರದರ್ಶಿಸಿ ಪ್ರಕರಣವನ್ನು ಮುಚ್ಚಿಹಾಕುವ ಹುನ್ನಾರ ನಡೆಸಿತ್ತೇ ಎಂಬ ಅನುಮಾನ ದಟ್ಟವಾಗಿದೆ. ಚಿಲುಮೆ ಸಂಸ್ಥೆ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಡೆಸುತ್ತಿರುವ ಚಟುವಟಿಕೆಗಳು, ದತ್ತಾಂಶ ಸಂಗ್ರಹ ಸೇರಿದಂತೆ ಹಲವು ಕಾನೂನು ಬಾಹಿರ ಕೃತ್ಯಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ ಸಮನ್ವಯ ಟ್ರಸ್ಟ್ ಸೆ.20ರಂದು ಜಿಲ್ಲಾ ಮುಖ್ಯ ಚುನಾವಧಿಣಾಕಾರಿಯಾಗಿರುವ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಇ-ಮೇಲ್ ಮೂಲಕ ದೂರು ನೀಡಿತ್ತು. ಆದರೆ, ಈ ದೂರನ್ನು ಉದ್ದೇಶಪೂರ್ವಕವಾಗಿ […]

ವೋಟರ್ ಲಿಸ್ಟ್ ಗೋಲ್‌ಮಾಲ್‌ ; ಗೊಂದಲದಲ್ಲಿ ಮತದಾರರು

ಬೆಂಗಳೂರು,ನ.22- ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಮತದಾರರ ಪಟ್ಟಿ ಗೋಲ್‍ಮಾಲ್ ಪ್ರಕರಣದಿಂದ ಮತದಾರರಲ್ಲಿ ಭಾರೀ ಗೊಂದಲ ಸೃಷ್ಟಿಯಾಗಿದೆ. ಮತ ಪರಿಷ್ಕರಣೆ ನೆಪದಲ್ಲಿ ಮತದಾರರ ಮಾಹಿತಿಗೆ ಕನ್ನ ಹಾಕಲಾಗಿದೆ. ಮತಪಟ್ಟಿಯಿಂದ ಹೆಸರನ್ನು ಕೈಬಿಡಲಾಗಿದೆ. ಹಲವು ವಿಧಾನಸಭೆ ಕ್ಷೇತ್ರಗಳಲ್ಲಿ ಭಾರೀ ಸಂಖ್ಯೆಯಲ್ಲಿ ಮತದಾರರ ಹೆಸರುಗಳನ್ನು ಡಿಲಿಟ್ ಮಾಡಿ ಅನ್ಯಾಯ ಮಾಡಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಎನ್‍ಜಿಒ ಸಂಸ್ಥೆಯೊಂದು ಮತದಾರರ ಪಟ್ಟಿಯನ್ನು ಪರಿಷ್ಕರಣೆ ಮಾಡಿ ರಾಜಕೀಯ ಪಕ್ಷವೊಂದಕ್ಕೆ ಅನುಕೂಲವಾಗಲು ಪೂರಕ ಕೆಲಸ ಮಾಡಿರುವುದಲ್ಲದೆ ಹಣಕ್ಕೆ ಮತ ಮಾಹಿತಿಯನ್ನು ಮಾರಾಟ ಮಾಡಿಕೊಂಡಿರುವ […]

ಮತದಾರರ ಪಟ್ಟಿ ಅಕ್ರಮ : ನಾಳೆ ಕಾಂಗ್ರೆಸ್‍ನಿಂದ ಆಯೋಗಕ್ಕೆ ದೂರು

ಬೆಂಗಳೂರು, ನ.22- ಮತದಾರರ ಪಟ್ಟಿ ಅಕ್ರಮವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಲು ನಿರ್ಧರಿಸಿರುವ ಕಾಂಗ್ರೆಸ್, ನಾಳೆ ಚುನಾವಣಾ ಆಯೋಗವನ್ನು ಭೇಟಿ ಮಾಡಿ, ಲಿಖಿತ ದೂರು ಸಲ್ಲಿಸಲಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ದೆಹಲಿಗೆ ತೆರಳಿದ್ದು ಅಲ್ಲಿ ಕಾನೂನು ತಜ್ಞರು ಹಾಗೂ ಎಐಸಿಸಿ ಪದಾಧಿಕಾರಿಗಳನ್ನು ಭೇಟಿ ಮಾಡಲಿದ್ದಾರೆ. ಮೊದಲ ಹಂತದ ಚರ್ಚೆ ನಡೆಸಿದ ಬಳಿಕ ಕಾನೂನಾತ್ಮಕವಾದ ಲಿಖಿತ ದೂರನ್ನು ಸಿದ್ಧ ಪಡಿಸಿ ನಾಳೆ ಆಯೋಗಕ್ಕೆ ಸಲ್ಲಿಸಲು ನಿರ್ಧರಿಸಲಾಗಿದೆ. ಕಾಂಗ್ರೆಸ್ ನಿಯೋಗ ಈಗಾಗಲೇ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಹಾಗೂ […]

ತಪ್ಪು ಮಾಡಿದ್ದರೆ ನಮಗೂ ಶಿಕ್ಷೆಯಾಗಲಿ : ಡಿಕೆಶಿ

ಬೆಂಗಳೂರು, ನ.21- ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಮಾಹಿತಿ ಕಳವು ಪ್ರಕರಣದಲ್ಲಿ ಕಾಂಗ್ರೆಸ್ ಮೇಲೆ ತಪ್ಪು ಹೊರಿಸಲು ಪ್ರಯತ್ನಿಸಲಾಗುತ್ತಿದೆ. 2013 ರಿಂದ ಚಿಲುಮೆ ಸಂಸ್ಥೆ ವ್ಯವಹಾರ ತನಿಖೆ ಮಾಡಿಸಲು ಮುಂದಾಗಿರುವ ಮುಖ್ಯಮಂತ್ರಿಗಳ ತೀರ್ಮಾನವನ್ನು ನಾವು ಸ್ವಾಗತಿಸುತ್ತೇವೆ. ನಾವು ಮತದಾರರ ಮಾಹಿತಿ ದುರ್ಬಳಕೆ ಮಾಡಿಕೊಂಡಿದ್ದರೆ ನಮಗೂ ಶಿಕ್ಷೆ ಆಗಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸವಾಲೆಸೆದಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತರ ಭೇಟಿಗೆ ಕಾಲಾವಕಾಶ ಕೇಳಿದ್ದೇವೆ. ಮತಪಟ್ಟಿ ಹಗರಣ ಸಂಬಂಧ […]

ಚಿಲುವೆ ಸಂಸ್ಥೆಯ ಮತ್ತೊಬ್ಬ ಪ್ರಮುಖ ಆರೋಪಿ ಲೋಕೇಶ್ ಬಂಧನಕ್ಕೆ ತೀವ್ರ ಹುಡುಕಾಟ

ಬೆಂಗಳೂರು,ನ.21- ಮತದಾರರ ವೈಯಕ್ತಿಕ ಮಾಹಿತಿ ಕಳುವು ಮಾಡಿದ ಆರೋಪಕ್ಕೆ ಗುರಿಯಾಗಿರುವ ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್ ಬಂಧನವಾಗುತ್ತಿದ್ದಂತೆ ಮತ್ತೊಬ್ಬ ಪ್ರಮುಖ ಆರೋಪಿ ಲೋಕೇಶ್ ಬಂಧನಕ್ಕೆ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಚಿಲುಮೆ ಸಂಸ್ಥೆಯಲ್ಲಿ ಆಡಳಿತಾಧಿಕಾರಿಯಾಗಿದ್ದ ಲೋಕೇಶ್ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ನಾಪತ್ತೆಯಾಗಿದ್ದ ಆತನ ವಿರುದ್ಧ ಕಾಡುಗೋಡಿ ಹಾಗೂ ಹಲಸೂರು ಗೇಟ್ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು. ಚಿಲುಮೆ ಸಂಸ್ಥೆಯ ಸಿಬ್ಬಂದಿಗಳಿಗೆ ಬಿಎಲ್‍ಓಗಳೆಂದು ಗುರುತಿನ ಚೀಟಿ ಮಾಡಿಕೊಟ್ಟ ಆರೋಪದ ಮೇಲೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರಿನಲ್ಲಿ ಲೋಕೇಶ್ […]

ಹುಬ್ಬಳ್ಳಿಗೂ ವ್ಯಾಪಿಸಿದ ವೋಟರ್ ಐಡಿ ಹಗರಣ

ಹುಬ್ಬಳ್ಳಿ,ನ.21- ರಾಜ್ಯಾದ್ಯಂತ ದೊಡ್ಡ ವಿವಾದ ಸೃಷ್ಟಿಸಿರುವ ಮತದಾರರ ಮಾಹಿತಿ ಹಗರಣ ಈಗ ವಾಣಿಜ್ಯ ನಗರಿ ಹುಬ್ಬಳ್ಳಿಗೂ ಅಂಟಿಕೊಂಡಿದೆ. ಆರು ತಿಂಗಳ ಹಿಂದೆಯೇ ಖಾಸಗಿ ಕಂಪನಿಯಿಂದ ಮತದಾರರ ಮಾಹಿತಿ ಸಂಗ್ರಹಮಾಡಲಾಗಿದ್ದು ತಿಳಿದು ಬಂದಿದೆ. ಧಾರವಾಡ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ಮಾಹಿತಿ ಸಂಗ್ರಹ ಮಾಡಲಾಗಿದೆ ಎನ್ನಲಾಗುತ್ತಿದೆ. ಬೆಂಗಳೂರು ಮೂಲದ ಐಐಎಂಟಿ ಸಂಸ್ಥೆಯಿಂದ ಮತದಾರರ ಮಾಹಿತಿ ಸಂಗ್ರಹ ಮಾಡಿರುವ ವಿಷಯ ಹೊರಬಿದ್ದಿದೆ. ಕಾಂಗ್ರೆಸ್ ಪಾಲಿಕೆ ಸದಸ್ಯರ ವ್ಯಾಪ್ತಿಯಲ್ಲಿ ಮತದಾರರ ಮಾಹಿತಿ ಸಂಗ್ರಹವನ್ನು ಮಾಡಲಾಗಿದ್ದು, ಕಾಂಗ್ರೆಸ್ ಪಾಲಿಕೆ ಸದಸ್ಯರು ಮತದಾರರ ಮಾಹಿತಿ […]