ಬೈಕ್ ಸವಾರನಿಗೆ ದೊಣ್ಣೆಯಿಂದ ಥಳಿಸಿದ ಡಿಸಿ ಅಮಾನತು

ಗುವಾಹಟಿ, ಸೆ.29- ತಪ್ಪು ಮಾರ್ಗದಲ್ಲಿ ಬರುತ್ತಿದ್ದ ಬೈಕ್ ಸವಾರನನ್ನು ದೊಣ್ಣೆಯಿಂದ ಥಳಿಸಿದ ಕಾರಣಕ್ಕೆ ಅಸ್ಸಾಂನ ಹೊಜೈ ಜಿಲ್ಲೆಯ ಜಿಲ್ಲಾಧಿಕಾರಿ (ಡಿಸಿ) ಮತ್ತು ಹೆಚ್ಚುವರಿ ಜಿಲ್ಲಾಧಿಕಾರಿ (ಎಡಿಸಿ) ಅವರನ್ನು ಅಮಾನತುಗೊಳಿಸಲಾಗಿದೆ. ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಆದೇಶದ ಮೇರೆಗೆ ಹೋಜೈ ಡಿಸಿ ಅನುಪಮ್ ಚೌಧರಿ ಮತ್ತು ಎಡಿಸಿ ರಕ್ತಿಮ್ ಬರುವಾ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಮುಖ್ಯಮಂತ್ರಿಗಳು ಖುದ್ದಾಗಿ ವೀಕ್ಷಿಸಿದ ಬಳಿಕ ಬುಧವಾರ ರಾತ್ರಿ ಹಿರಿಯ ಅಧಿಕಾರಿಗಳನ್ನು ಅಮಾನತುಗೊಳಿಸುವ ನಿರ್ಧಾರ ಕೈಗೊಂಡಿದ್ದಾರೆ. […]

ಅತಿವೃಷ್ಟಿಗೊಳಗಾದ ಜಿಲ್ಲೆಗಳ ಡಿಸಿಗಳೊಂದಿಗೆ ಸಿಎಂ ಸಭೆ

ಬೆಂಗಳೂರು,ಜು.15- ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಅತಿವೃಷ್ಟಿ ಯಿಂದ ಹಾನಿಗೊಳಗಾದ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ರಾಜ್ಯದ ವಿವಿಧೆಡೆ ಅತಿಯಾಗಿ ಸುರಿಯುತ್ತಿರುವ ಮಳೆ ಮತ್ತು ಪ್ರಕೃತಿ ವಿಕೋಪ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ದೇವನಹಳ್ಳಿಯಿಂದ ವಿಡಿಯೋ ಕಾನರೆನ್ಸ್ ಮೂಲಕ ಮುಖ್ಯಮಂತ್ರಿ ಸಭೆ ನಡೆಸಲಿದ್ದಾರೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಬಳ್ಳಾಪುರ, ಹಾಸನ, ಬೀದರ್, ಬೆಳಗಾವಿ, ಕಲಬುರಗಿ, ಮೈಸೂರು, ಹಾವೇರಿ, ಧಾರವಾಡ, ದಾವಣಗೆರೆ, ಯಾದಗಿರಿ, ಬಾಗಲಕೋಟೆ, ವಿಜಯ ಪುರ, ರಾಯಚೂರು, ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಭೆ […]

ಬಿಡ್ಡಿಂಗ್‍ಗೂ ಮುಂಚೆಯೇ ಸ್ಥಾನ ಭದ್ರಪಡಿಸಿಕೊಂಡ ಸ್ಟಾರ್ ಆಟಗಾರರು

ಬೆಂಗಳೂರು, ಫೆ. 12- ಉತ್ತಮ ಪ್ರದರ್ಶನ ತೋರುವ ಮೂಲಕ ತಾವು ಪ್ರತಿನಿಸಿದ ತಂಡಗಳಿಗೆ ಹಲವು ಗೆಲುವು ತಂದುಕೊಟ್ಟು ಹಾಗೂ ತಂಡವನ್ನು ಚಾಂಪಿಯನ್ ಆಗಿಸುವಲ್ಲಿ ಮಹತ್ತರ ಪಾತ್ರ ವಹಿಸಿದ್ದ ಆಟಗಾರರು ಈ ಬಾರಿಯೂ ಫ್ರಾಂಚೈಸಿಗಳು ಉಳಿಸಿಕೊಂಡಿದ್ದು, ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಐಪಿಎಲ್‍ನ ಆರಂಭಿಕ ಋತುವಿನಿಂದಲೂ ಸ್ಥಾನ ಪಡೆದಿರುವ ವಿರಾಟ್ ಕೊಹ್ಲಿ ಈ ಬಾರಿಯೂ ಆ ತಂಡದಲ್ಲೇ ಉಳಿದುಕೊಂಡಿದ್ದಾರೆ. ಇನ್ನು ಇದೇ ಬಾರಿ ಹೊಸದಾಗಿ ಐಪಿಎಲ್ ಬಿಡ್ಡಿಂಗ್‍ನಲ್ಲಿ ಸ್ಥಾನ ಪಡೆದಿರುವ ಗುಜರಾತ್ ಟೈಟಾನ್ಸ್ ತಂಡವು ಬಿಡ್ಡಿಂಗ್‍ಗೂ ಮುನ್ನವೇ […]