ಮಾನ್‍ಡೋಸ್ ಚಂಡಮಾರುತ, ರಾಜ್ಯದಲ್ಲಿ ನಾಲ್ಕು ದಿನ ಮಳೆ ಸಾಧ್ಯತೆ

ಬೆಂಗಳೂರು,ಡಿ.9- ಬಂಗಾಳಕೊಲ್ಲಿ ಯಲ್ಲಿ ಉಂಟಾಗಿರುವ ಮಾನ್‍ಡೋಸ್ ಚಂಡಮಾರುತದ ಪ್ರಭಾವದಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಕೆಲವೆಡೆ ಆಗಾಗ್ಗೆ ಹಗುರ ಮಳೆಯಾಗುತ್ತಿದೆ. ಹವಾಮಾನ ಮುನ್ಸೂಚನೆಯಂತೆ ಮಂಗಳವಾರದವರೆಗೂ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಕೆಲವೆಡೆ ಮಳೆ ಮುಂದುವರೆಯುವ ಸಾಧ್ಯತೆಗಳಿವೆ. ಮಾನ್‍ಡೋಸ್ ಚಂಡಮಾರುತವು ತಮಿಳುನಾಡು ತಲುಪಿದ್ದು, ಉತ್ತರಾಭಿಮುಖವಾಗಿ ಆಂಧ್ರಪದ್ರೇಶದ ಕಡೆಗೆ ಚಲಿಸುತ್ತಿದೆ. ಇದರಿಂದ ತಮಿಳುನಾಡಿನ ಉತ್ತರ ಭಾಗ ಹಾಗೂ ಆಂಧ್ರಪ್ರದೇಶದ ದಕ್ಷಿಣ […]