ಇಯರ್ ಎಂಡ್ ಸೆಲೆಬ್ರೇಷನ್ ಸಂದರ್ಭದಲ್ಲೇ ಆಟೋ ಮುಷ್ಕರ

ಬೆಂಗಳೂರು,ಡಿ.20- ಇಯರ್ ಎಂಡ್ ಸೆಲೆಬ್ರೇಷನ್ ಸಂದರ್ಭದಲ್ಲೇ ಆಟೋ ಚಾಲಕರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿ.29ರಿಂದ ಆಟೋ ಚಾಲಕರು ಆಟೋ ಬಂದ್ ನಡೆಸಲು ತೀರ್ಮಾನಿಸಿದ್ದಾರೆ. ರ್ಯಾಪಿಡ್ ಬೈಕ್ ಟ್ಯಾಕ್ಸಿ ಬ್ಯಾನ್ ಮಾಡಬೇಕು, ಬೌನ್ಸ್ ಎಲೆಕ್ಟ್ರೀಕ್ ಬೈಕ್‍ಗೆ ನೀಡಿರುವ ಅನುಮತಿ ರದ್ದುಪಡಿಸುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಸರ್ಕಾರ ಈ ಕೂಡಲೇ ಈಡೇರಿಸಬೇಕು ಎಂದು ಆಟೋ ಚಾಲಕರು ಪಟ್ಟು ಹಿಡಿದಿದ್ದಾರೆ. ಈ ಆಟೋ ಮುಷ್ಕರಕ್ಕೆ 21 ಸಂಘಟನೆಗಳು ಬೆಂಬಲ ನೀಡಿದ್ದು, 29 ರಂದು […]