ನಾಳೆ ರ‍್ಯಾಪಿಡ್ ರಸ್ತೆ ಲೋಕಾರ್ಪಣೆ, ಪ್ರಾಯೋಗಿಕ ಸಂಚಾರಕ್ಕೆ ಅವಕಾಶ

ಬೆಂಗಳೂರು,ಡಿ.7- ನೂತನ ತಂತ್ರಜ್ಞಾನ ಬಳಸಿ ಉದ್ಯಾನನಗರಿಯಲ್ಲಿ ಪ್ರಪ್ರಥಮ ಬಾರಿಗೆ ನಿರ್ಮಿಸಲಾಗಿರುವ ರ‍್ಯಾಪಿಡ್ ರಸ್ತೆಯನ್ನು ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದಾರೆ. ಬಿಬಿಎಂಪಿ ವತಿಯಿಂದ ನಗರದ ಹಳೆಮದ್ರಾಸ್ ರಸ್ತೆಯ ಹೊಸ ಬಿನ್ನಮಂಗಲ ವೃತ್ತದ ಬಳಿ 500 ಮೀಟರ್ ಉದ್ದದ ರ‍್ಯಾಪಿಡ್ ರಸ್ತೆಯನ್ನು ನಿರ್ಮಿಸಲಾಗಿದ್ದು, ಪ್ರಾಯೋಗಿಕವಾಗಿ ನಾಳೆ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು. ನಗರದ ರಸ್ತೆಗಳಲ್ಲಿ ವೈಟ್‍ಟಾಪಿಂಗ್ ಅಥವಾ ಟೆಂಡರ್‍ಶೂರ್ ಕಾಮಗಾರಿ ನಡೆಸುವ ಸಮಯದಲ್ಲಿ ವಾಹನ ಸಂಚಾರ ನಿಷೇಧಿಸುವುದರಿಂದ ದಟ್ಟಣೆ ಹೆಚ್ಚಾಗಿದ್ದು, ಇದನ್ನು ತಪ್ಪಿಸುವ ಸಲುವಾಗಿ ಪಾಲಿಕೆಯು ರ್ಯಾಪಿಡ್ ರಸ್ತೆ […]

ಹೊಸ ಮತದಾರರ ನೋಂದಣಿಗೆ ಡಿ.8 ರವರೆಗೆ ಅವಕಾಶ

ಬೆಂಗಳೂರು,ಡಿ.4- ಜಿಲ್ಲೆಯಲ್ಲಿ ಉತ್ತಮ ರೀತಿಯಲ್ಲಿ ವಿಕಲಚೇತನರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲಾಗುತ್ತಿದೆ. ಪಟ್ಟಿಯಲ್ಲಿ ನೋಂದಣಿಯಾಗದ ಅರ್ಹ ವಿಕಲಚೇತನರು ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಆಕ್ಷೇಪಣೆ ಸಲ್ಲಿಸಲು ಡಿಸೆಂಬರ್ 8 ರವರೆಗೆ ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಮತದಾರರ ಪಟ್ಟಿ ಪರಿಷ್ಕರಣೆ ವೀಕ್ಷಕರಾದ ಬಿ.ಆರ್.ಮಮತಾ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದಲ್ಲಿ ಬೀರಸಂದ್ರದ ಜಿಲ್ಲಾಡಳಿತ ಭವನದಲ್ಲಿ ಆಯೋಜಿಸಿದ್ದ ವಿಶ್ವ ವಿಕಲಚೇತನರ ದಿನಾಚರಣೆ-2022ರ ಕಾರ್ಯಕ್ರಮದಲ್ಲಿ […]