ಡಿಸೆಂಬರ್‌ನಲ್ಲಿ ಚಳಿಗಾಲದ ಅಧಿವೇಶನ

ಬೆಂಗಳೂರು. ಅ.18-ರಾಜ್ಯ ವಿಧಾನ ಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನವನ್ನು ಡಿಸೆಂಬರ್ ಎರಡನೇ ವಾರದಿಂದ ಹತ್ತು ದಿನಗಳ ಕಾಲ ಬೆಳಗಾವಿಯಲ್ಲಿ ನಡೆಸಲು ರಾಜ್ಯ ಸರ್ಕಾರ ಉದ್ದೇಶಿಸಿದೆ. ಪ್ರತಿ ವರ್ಷದ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲಿ ನಡೆಸುವ ಸಂಪ್ರದಾಯವಿದೆ. ಅದರಂತೆ ಈ ಬಾರಿಯ ಅಧಿವೇಶನವನ್ನು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಸಲಾಗುತ್ತದೆ. ಅಂದರೆ ಡಿ.12ರಿಂದ 23ರವರೆಗೆ ಹತ್ತು ದಿನಗಳ ಕಾಲ ಅಧಿವೇಶನ ನಡೆಸಲು ತಾತ್ಕಾಲಿಕ ದಿನಾಂಕ ನಿಗದಿಪಡಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಸುವರ್ಣ ವಿಧಾನಸೌಧ ನಿರ್ಮಾಣಗೊಂಡು ಹತ್ತು ವರ್ಷಗಳು ಕಳೆದ ಬಳಿಕ […]

ಪೀಣ್ಯ ಎಲಿವೇಟೆಡ್ ಕಾಮಗಾರಿ 3 ತಿಂಗಳಲ್ಲಿ ಪೂರ್ಣ

ಬೆಂಗಳೂರು,ಸೆ.20- ಬೆಂಗಳೂರು-ಮುಂಬೈ ಸಂಪರ್ಕಿಸುವ ಪೀಣ್ಯ ಎಲಿವೆಟೆಡ್ ಕಾಮಾಗಾರಿ ಡಿಸೆಂಬರ್ ತಿಂಗಳಿಗೆ ಪೂರ್ಣಗೊಳ್ಳಲಿದ್ದು ಭಾರೀ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕಳೆದ ವಾರ ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ಬಂದಾಗ ನಾನು ಈ ವಿಷಯವನ್ನು ಪ್ರಸ್ತಾಪಿಸಿ ತುರ್ತಾಗಿ ಈ ಕಾಮಗಾರಿಯನ್ನು ಮುಗಿಸಿಕೊಡಲು ಮನವಿ ಮಾಡಿದ್ದೆ. ಫ್ಲೈಓವರ್ ಮೇಲೆ ನಡೆಸಲು ಉದ್ದೇಶಿಸಿರುವ ಕಾಮಗಾರಿಗಳ ಪ್ರಸ್ತಾವನೆಯನ್ನು ಸಿದ್ದಪಡಿಸಿ ನಮ್ಮ ಇಲಾಖೆಗೆ ಸಲ್ಲಿಸಿದರೆ ಆದಷ್ಟು ಶೀಘ್ರ ಹಣ ಬಿಡುಗಡೆ ಮಾಡುತ್ತೇನೆ ಎಂದಿದ್ದಾರೆ. ಈಗಾಗಲೇ ಅಧಿಕಾರಿಗಳು ಪತ್ರ […]

“ಡಿಸೆಂಬರ್ ಅಂತ್ಯದೊಳಗೆ 438 ನಮ್ಮ ಕ್ಲಿನಿಕ್‍ ಆರಂಭ”

ಬೆಂಗಳೂರು,ಸೆ.19-ಬೆಂಗಳೂರು ಸೇರಿದಂತೆ ನಗರಪ್ರದೇಶಗಳಲ್ಲಿ ಬಡವರು ಮತ್ತು ದುರ್ಬಲ ವರ್ಗದವರು ವಾಸಿಸುವ ಪ್ರದೇಶಗಳಲ್ಲಿ 438 ನಮ್ಮ ಕ್ಲಿನಿಕ್‍ಗಳನ್ನು ಡಿಸೆಂಬರ್ ಅಂತ್ಯದೊಳಗೆ ಆರಂಭಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ವಿಧಾನಪರಿಷತ್‍ನ ಪ್ರಶ್ನೋತ್ತರದ ಅವಧಿಯಲ್ಲಿ ಸದಸ್ಯರಾದ ಸಿ.ಎನ್.ಮಂಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಬೆಂಗಳೂರಿನಲ್ಲಿ 243 ಇತರ ಜಿಲ್ಲೆಗಳಲ್ಲಿ 195 ನಮ್ಮ ಕ್ಲಿನಿಕ್‍ಗಳನ್ನು ಒಟ್ಟು 155.77 ಕೋಟಿ ರೂ. ವೆಚ್ಚದಲ್ಲಿ ಆರಂಭಿಸಲಾಗುವುದು ಎಂದರು. ಇದನ್ನೂ ಓದಿ : ಆಟೋ ಚಾಲಕನಿಗೆ ಹೊಡೀತು 25 ಕೋಟಿ ರೂ. ಬಂಪರ್ […]

2023ರ ಡಿಸೆಂಬರ್ ವೇಳೆಗೆ ಹಾಸನದಲ್ಲಿ ವಿಮಾನ ನಿಲ್ದಾಣ ಕಾರ್ಯಾರಂಭ…!

ಹಾಸನ, ಜು.23- ಮುಂದಿನ ವರ್ಷ 2023ರ ಡಿಸೆಂಬರ್ ವೇಳೆಗೆ ಹಾಸನ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಂಡು ವಿಮಾನ ಹಾರಾಟ ಆರಂಭವಾಗಲಿದೆ ಎಂದು ಕೆಎಸ್‍ಐಐಡಿಸಿ ಅಧ್ಯಕ್ಷ ಡಾ. ಶೈಲೇಂದ್ರ ತಿಳಿಸಿದರು. ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಣೆ ಹಾಗೂ ಅಧಿಕಾರಿಗಳ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಮಾನ ನಿಲ್ದಾಣ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಹಾಗೂ ಮೂಲಸೌಕರ್ಯ ಸಚಿವ ವಿ. ಸೋಮಣ್ಣ ಅವರು ಕಟ್ಟುನಿಟ್ಟಿನ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ವಿವಿಧ ಜಿಲ್ಲಾಯ ವಿಮಾನ ನಿಲ್ದಾಣಗಳ ಕಾಮಗಾರಿ ಅಭಿವೃದ್ಧಿ […]