ಬಿಬಿಎಂಪಿ ಆಡಳಿತ ವಿಕೇಂದ್ರಿಕರಣಕ್ಕೆ ಸುಧಾರಣ ಆಯೋಗ ಶಿಫಾರಸು

ಬೆಂಗಳೂರು,ಫೆ.10- ಆಡಳಿತಾತ್ಮಕ ದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಡಳಿತವನ್ನು ವಿಕೇಂದ್ರಿಕರಣಗೊಳಿಸುವಂತೆ ಕರ್ನಾಟಕ ರಾಜ್ಯ ಆಡಳಿತ ಸುಧಾರಣಾ ಆಯೋಗ ಶಿಫಾರಸು ಮಾಡಿದೆ. ಸಮನ್ವಯ ಮತ್ತು ವಿಕೇಂದ್ರೀಕೃತ ಆಡಳಿತಕ್ಕಾಗಿ ವಿಭಾಗೀಯ ಮಟ್ಟದಲ್ಲಿ ಸ್ಥಳೀಯ ಆಡಳಿತವನ್ನು ಸುಧಾರಿಸಲು ಮತ್ತು ವಿವಿಧ ಇಲಾಖೆಗಳ ನಡುವೆ ಸಮನ್ವಯ ಸಾಧಿಸಲು 30 ಸಹಾಯಕ ಆಯುಕ್ತರುಗಳ ಹುದ್ದೆಗಳನ್ನು ಸೃಷ್ಟಿಸಬೇಕು. 70 ಹೆಚ್ಚುವರಿ ಕಂದಾಯ ನಿರೀಕ್ಷಕರು ಹಾಗೂ 94 ಹೆಚ್ಚುವರಿ ತೆರಿಗೆ ನಿರೀಕ್ಷಕರ ಹುದ್ದೆಗಳನ್ನು ಸೃಷ್ಟಿಸಿಕೊಳ್ಳಬೇಕು. ಇಂತಹ ಸಿಬ್ಬಂದಿಗಳನ್ನು ಪ್ರತಿ ಐದು ವರ್ಷ ಗಳಿಗೊಮ್ಮೆ ವರ್ಗಾವಣೆ ಮಾಡುವುದರ […]