ಪಕ್ಷದ ತೊರೆದ ವಾರದಲ್ಲೇ ಕಾಂಗ್ರೆಸ್‌ನತ್ತ ಮುಖ ಮಾಡಿದ ಮಾಜಿ ಅಲೆಕ್ಸೊ

ಪಣಜಿ, ಜ.17- ಕಾಂಗ್ರೆಸ್ ಪಕ್ಷದಿಂದ ಹೊರನಡೆದು, ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ವಾರಗಳ ನಂತರ, ಯಾವುದೇ ಕಾರಣ ನೀಡದೆ ಗೋವಾದ ಕಾಂಗ್ರೆಸ್‌ನ ಮಾಜಿ ಕಾರ್ಯಾಧ್ಯಕ್ಷ ಅಲೆಕ್ಸೊ ರೆಜಿನಾಲ್ಡೊ ಲೌರೆಂಕೊ ಸೋಮವಾರ ತಮ್ಮ ಮಾತೃಪಕ್ಷಕ್ಕೆ ಮರುಸೇರ್ಪಡೆಯಾಗುವ ಸುಳಿವು ನೀಡಿದ್ದಾರೆ. ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷವನ್ನು ಸೇರುವ “ತಪ್ಪು” ಎಸಗಿದ್ದಕ್ಕಾಗಿ ಅವರು ತಮ್ಮ ಬೆಂಬಲಿಗರು ಮತ್ತು ಹಿತೈಷಿಗಳಲ್ಲಿ ಕ್ಷಮೆಯಾಚಿಸಿದ್ದಾರೆ. ಸೋಮವಾರ ಪಣಜಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಲೌರೆಂಕೊ, ಟಿಎಂಸಿಗೆ ಸೇರಲು ನಿರ್ಧರಿಸಿದ ನಂತರ […]