ವರ್ಷಾಂತ್ಯಕ್ಕೆ ಮೈಸೂರು-ತುಮಕೂರು ಡಬ್ಬಲ್ ಡೆಕ್ಕರ್ ಬಸ್ ಸೇವೆ

ಬೆಂಗಳೂರು,ಜ.31- ಮೈಸೂರು ಮತ್ತು ತುಮಕೂರಿನ ನಾಗರಿಕರು ಈ ವರ್ಷದ ಅಂತ್ಯದ ವೇಳೆಗೆ ಡಬಲ್ ಡೆಕ್ಕರ್ ಬಸ್‍ಗಳಲ್ಲಿ ಪ್ರಯಾಣಿಸುವ ಸಾಧ್ಯತೆ ಇದೆ. ಇದೇ ಮೊದಲ ಬಾರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪ್ರಾಯೋಗಿಕ ಕಾರ್ಯಕ್ರಮದಡಿ ಮೈಸೂರು ಮತ್ತು ತುಮಕೂರಿನಲ್ಲಿ ನಗರದೊಳಗಿನ ಪ್ರಯಾಣಕ್ಕಾಗಿ ಡಬಲ್ ಡೆಕ್ಕರ್, ಹವಾನಿಯಂತ್ರಿತ ಎಲೆಕ್ಟ್ರಿಕ್ ಬಸ್‍ಗಳನ್ನು ಪರಿಚಯಿಸಲು ಯೋಜಿಸುತ್ತಿದೆ. ಈಗಾಗಲೇ ಮೈಸೂರಿನಲ್ಲಿ ಅಂಬಾರಿ ಎಂಬ ಡಬಲ್ ಡೆಕ್ಕರ್ ಬಸ್ ಪ್ರವಾಸೋದ್ಯಮ ಉತ್ತೇಜನಕ್ಕಾಗಿ ಸೇವೆಯಲ್ಲಿದೆ. ವಿದ್ಯಾರ್ಥಿಗಳು ಮತ್ತು ಪ್ರವಾಸಿಗರಿಗೆ ಸೇವೆ ಒದಗಿಸುವ ಉದ್ದೇಶದಿಂದ ಪ್ರತಿ ನಗರಕ್ಕೆ […]