ತಮಿಳುನಾಡು, ಕೇರಳದಲ್ಲಿ ಭಾರಿ ಮಳೆ

ಚೆನ್ನೈ.ಫೆ.3-ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ತಮಿಳುನಾಡು, ಕೇರಳದಲ್ಲಿ ಭಾರಿ ಮಳೆಯಾಗುತ್ತಿದೆ. ತಮಿಳುನಾಡು ಕರಾವಳಿಯಲ್ಲಿ ಹೆಚ್ಚು ಮಳೆಯಾಗುತ್ತಿದೆ ,ತಿರುವರೂರು, ನಾಗಪಟ್ಟಣಂ ಜಿಲ್ಲೆ ದೇರಿ ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಗಾಳಿಯು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸುತ್ತಿದ್ದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಕೇರಳ ಭಾಗದಲ್ಲಿ 64.5 ಮಿಮೀ-115.5 ಮಿಮೀ ವರೆಗೆ ಭಾರೀ ಮಳೆ ಆಗುವ ಸಾಧ್ಯತೆ ಇದೆ. ಪುದುಚೇರಿಯಾದ್ಯಂತ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಖ್ಯಾತ ಹಿರಿಯ ನಟ ಕಾಸಿನಾಧುನಿ […]

ಜಾಗತೀಕ ಉಗ್ರ ಪಟ್ಟಿಗೆ ಮಕ್ಕಿ

ನ್ಯೂಯಾರ್ಕ್,ಜ.17- ಪಾಕ್ ಮೂಲದ ಭಯೋತ್ಪಾದಕ ಅಬ್ದುಲ್ ರೆಹಮಾನ್ ಮಕ್ಕಿಯನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಜಾಗತೀಕ ಭಯೋತ್ಪಾದಕ ಎಂದು ಪರಿಗಣಿಸಿದೆ. ಲಷ್ಕರ್-ಎ-ತೊಯ್ಬಾ ಉಗ್ರನಾಗಿರುವ ಮಕ್ಕಿಯನ್ನು ಜಾಗತೀಕ ಭಯೋತ್ಪಾದಕ ಎಂದು ಪರಿಗಣಿಸುವಂತೆ ಕಳೆದ ವರ್ಷ ಭಾರತ ಮಾಡಿಕೊಂಡಿದ್ದ ಮನವಿಗೆ ಚೀನಾ ವಿರೋಧ ವ್ಯಕ್ತಪಡಿಸಿತ್ತು. ಚೀನಾದ ಈ ಇಬ್ಬಗೆ ನೀತಿ ವಿರುದ್ಧ ಭಾರತ ಆಕ್ರೋಶ ವ್ಯಕ್ತಪಡಿಸಿತ್ತು. ಆದರೆ, ಇದೀಗ ಭಾರತದ ಬೇಡಿಕೆಗೆ ಮನ್ನಣೆ ದೊರೆತಿದ್ದು, ಮಕ್ಕಿಯನ್ನು ಜಾಗತೀಕ ಉಗ್ರ ಎಂದು ಪರಿಗಣಿಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಮ್ಮತಿಸಿದೆ. ಜಮ್ಮು-ಕಾಶ್ಮೀರದಲ್ಲಿ ಹಿಂಸಾಚಾರಕ್ಕೆ ಯುವಕರನ್ನು […]

ತ್ಯಾಜ್ಯ ಸಂಸ್ಕರಣೆ ಸ್ವಾವಲಂಬನೆಯೇ ಇಂದೋರ್ ಯಶಸ್ಸಿಗೆ ಕಾರಣ

ಇಂದೋರ್, ಅ.2-ಸತತ ಆರನೇ ಬಾರಿಗೆ ಇಂದೋರ್ ದೇಶದ ನಂಬರ್ 1 ಸ್ವಚ್ಚ ನಗರವಾಗಿ ಹೊರ ಹೊಮ್ಮಲು ಆ ನಗರ ಅಳವಡಿಸಿಕೊಂಡಿರುವ ತ್ಯಾಜ್ಯ ಸಂಸ್ಕರಣಾ ನೀತಿಯೇ ಕಾರಣ ಎನ್ನುವುದು ಇದೀಗ ಬಹಿರಂಗಗೊಂಡಿದೆ. ಪ್ರತಿದಿನ 1,900 ಟನ್ ನಗರ ತ್ಯಾಜ್ಯವನ್ನು ಸಂಸ್ಕರಣೆ ಮಾಡುವ ಮೂಲಕ ಕೋಟ್ಯಂತರ ರೂಪಾಯಿಗಳನ್ನು ಗಳಿಸುವುದರ ಜೊತೆಗೆ ಅದರಿಂದ ಉತ್ಪಾದಿಸುವ ಜೈವಿಕ ಇಂಧನವನ್ನು ಬಸ್ ಸಂಚಾರಕ್ಕೆ ಅಳವಡಿಸಿಕೊಂಡಿರುವುದರಿಂದಲೇ ಇಂದೋರ್ ದೇಶದ ಅತ್ಯಂತ ಸ್ವಚ್ಚ ನಗರಿ ಖ್ಯಾತಿಗೆ ಒಳಗಾಗಲು ಕಾರಣ ಎನ್ನುಲಾಗಿದೆ. ಇಂದೋರ್ ಅಳವಡಿಸಿಕೊಂಡಿರುವ ಈ ತ್ಯಾಜ್ಯ ನೀತಿಯನ್ನು […]

ರಾಜ್ಯದ ಎಲ್ಲಾ ಕಾಲೇಜುಗಳ ಅಧ್ಯಾಪಕರಿಗೆ ಸಿಹಿಸುದ್ದಿ

ಬೆಂಗಳೂರು,ಅ.1- ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಅನುದಾನಿತ ಪದವಿ ಕಾಲೇಜುಗಳ ಅಧ್ಯಾಪಕರಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, ಪದವಿ ಕಾಲೇಜುಗಳ ಅಧ್ಯಾಪಕರಿಗೆ ಇಂದಿನಿಂದ ಅ.9ರವರೆಗೆ ರಜೆ ಘೋಷಿಸಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಈ ಕುರಿತು ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು, ಖಾಸಗಿ ಅನಿದಾನಿತ ಪದವಿ ಕಾಲೇಜುಗಳು ಹಾಗೂ ಖಾಸಗಿ ಪದವಿ ಕಾಲೇಜುಗಳ ಅಧ್ಯಾಪಕರಿಗೆ ಇಂದಿನಿಂದ ಅ.9 ರವರೆಗೆ ರಜೆ ಘೋಷಿಸಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ […]

ಸಿಬಿಎಸ್‍ಸಿ 12 ನೇ ತರಗತಿ ಫಲಿತಾಂಶ ಪ್ರಕಟ

ನವದೆಹಲಿ.ಜು.22- ಸಿಬಿಎಸ್‍ಸಿ 2022 ನೇ 12 ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಶೇಕಡಾ 92.71 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರೆ. ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‍ಸಿ ) ಇಂದು ಬಳಿಗ್ಗೆ ಫಲಿತಾಂಶಗಳನ್ನು ಪ್ರಕಟಿಸಿದೆ, ಕಳೆದ ಹಲವು ದಿನದಿಂದ ವಿದ್ಯಾರ್ಥಿಗಳು ಎದುರು ನೋಡುತ್ತಿದ್ದರು. ವಿದ್ಯಾರ್ಥಿಗಳು ವೆಬ್‍ಸೈಟ್‍ಗಳಲ್ಲಿ ಅಂಕಪಟ್ಟಿಯನ್ನು ಡೌನ್ಲೋಡ್ ಮಾಡಬಹುದು cbse.gov.in, results.cbse.nic.in   ಭೇಟಿ ನೀಡಿ ನೊಂದಣಿ ಸಂಖ್ಯೆ, ಶಾಲೆಯ ಸಂಖ್ಯೆಗಳನ್ನು ಬಳಸಿ ಫಲಿತಾಂಶವನ್ನು ಪರಿಶೀಲಿಸಬಹುದು , ವರ್ಗವಾರು ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಿ. […]

ಜನರ ಆಕ್ರೋಶದಿಂದ ಹೊತ್ತಿಉರಿಯುತ್ತಿದೆ ಶ್ರೀಲಂಕಾ, ಎಮರ್ಜೆನ್ಸಿ ಘೋಷಣೆ

ಕೊಲಂಬೊ,ಜು.13- ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸೆ ದೇಶಬಿಟ್ಟು ಪರಾರಿಯಾದ ಬೆನ್ನಲ್ಲೇ ಜಾರಿಗೆ ಬರುವಂತೆ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ. ದೇಶದಲ್ಲಿ ಪ್ರತಿಭಟನೆ ಕ್ಷಣ ಕ್ಷಣಕ್ಕೂ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ತತ್‍ಕ್ಷಣದಿಂದಲೇ ಜಾರಿಗೆ ಬರುವಂತೆ ಮತ್ತೊಮ್ಮೆ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ರಾಯ್‍ಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿವೆ. ಅಧ್ಯಕ್ಷ ಗೋಟಬಯ ರಾಜಪಕ್ಸೆ ದೇಶಭ್ರಷ್ಟರಾಗುತ್ತಿದ್ದಂತೆ ಪ್ರಧಾನಿ ರನಿಲ್ ವಿಕ್ರಮಸಿಂಘೆ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಗಲಭೆಕೋರರನ್ನು ಬಂಧಿಸುವಂತೆ ಪೊಲೀಸರಿಗೆ ಆದೇಶಿಸಿದ್ದಾರೆ. ಇದರ ಬೆನ್ನಲ್ಲೆ […]