ದಿಢೀರ್ ದೆಹಲಿಯತ್ತ ಸಿಎಂ ಬೊಮ್ಮಾಯಿ, ಸಚಿವಾಕಾಂಕ್ಷಿಗಳಲ್ಲಿ ಚಿಗುರಿದ ಆಸೆ

ಬೆಂಗಳೂರು,ನ.28- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡು ದಿನಗಳ ಕಾಲ ದೆಹಲಿಗೆ ತೆರಳುತ್ತಿದ್ದು, ರಾಜಕೀಯ ಬೆಳವಣಿಗೆಗಳ ಬಗ್ಗೆ ಪಕ್ಷದ ವರಿಷ್ಠರ ಜೊತೆ ಮಾತುಕತೆ ನಡೆಸಲಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಷಾ ಸೇರಿದಂತೆ ಮತ್ತಿತರ ನಾಯಕರನ್ನು ಭೇಟಿ ಮಾಡಿ ನನೆಗುದಿಗೆ ಬಿದ್ದಿರುವ ನಿರೀಕ್ಷಿತ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಚರ್ಚೆ ನಡೆಸುವ ಸಂಭವವಿದೆ. ದೆಹಲಿಗೆ ಬರುವಂತೆ ಬುಲಾವ್ ಬಂದ ಬೆನ್ನಲ್ಲೇ ಬೊಮ್ಮಾಯಿಯವರ ಭೇಟಿ ನಿಗದಿಯಾಗಿದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ […]