ಇತರೆ ವರ್ಗಗಳ ಮೀಸಲಾತಿ ಬೇಡಿಕೆ ಹೆಚ್ಚಳ : ಇಕ್ಕಟ್ಟಿನಲ್ಲಿ ಸರ್ಕಾರ

ಬೆಂಗಳೂರು,ನ.26- ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಹೆಚ್ಚಿಸಿ ಅತಿಯಾದ ಆತ್ಮವಿಶ್ವಾಸದಿಂದ ಬೀಗುತ್ತಿದ್ದ ಆಡಳಿತಾರೂಢ ಬಿಜೆಪಿಗೆ ಇತರೆ ಸಮುದಾಯಗಳ ಮೀಸಲಾತಿ ಹೆಚ್ಚಳ ತಲೆನೋವಾಗಿ ಪರಿಣಮಿಸುತ್ತಿದೆ. ವಿಧಾಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ರಾಜ್ಯದ ಪ್ರಬಲ ಸಮುದಾಯಗಳಾದ ಪಂಚಮಶಾಲಿ ಲಿಂಗಾಯಿತ, ಒಕ್ಕಲಿಗ ಮತ್ತು ಕುರುಬ ಸೇರಿದಂತೆ ಬೇರೆ ಬೇರೆ ಸಮುದಾಯದವರೂ ಮೀಸಲಾತಿ ಹೆಚ್ಚಳ ಮಾಡಬೇಕೆಂದು ಸರ್ಕಾರಕ್ಕೆ ಗಡುವು ನೀಡುತ್ತಿರುವುದು ಬಿಸಿ ತುಪ್ಪವಾಗಿ ಪರಿಣಮಿಸಿದೆ. ಚುನಾವಣಾ ವರ್ಷ ಆಗಿರುವುದರಿಂದ ಯಾವುದೇ ಸಮುದಾಯವನ್ನು ಎದುರು ಹಾಕಿಕೊಳ್ಳುವಂತೆಯೂ ಇಲ್ಲ. […]

ವೋಟರ್ ಐಡಿ ಗೋಲ್‍ಮಾಲ್, ಆಯೋಗಕ್ಕೆ ಕಾಂಗ್ರೆಸ್ ದೂರು

ಬೆಂಗಳೂರು,ನ.19- ಮತದಾರರ ಗುರುತಿನಚೀಟಿ ಪರಿಷ್ಕರಣೆಯಲ್ಲಿ ನಡೆದಿರುವ ಅಕ್ರಮವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ತಪ್ಪಿತಸ್ಥರನ್ನು ತಕ್ಷಣವೇ ಬಂಧಿಸಬೇಕು ಎಂದು ಒತ್ತಾಯಿಸಿ ಪ್ರತಿಪಕ್ಷ ಕಾಂಗ್ರೆಸ್ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಎಂ.ಬಿ.ಪಾಟೀಲ್, ಮಾಜಿ ಸಚಿವರಾದ ದಿನೇಶ್ ಗುಂಡೂರಾವ್, ಕೃಷ್ಣಭೈರೇಗೌಡ ಸೇರಿದಂತೆ ಮತ್ತಿತರರ ನಿಯೋಗವು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್‍ಕುಮಾರ್ ಮೀನಾ ಅವರಿಗೆ ದೂರು ನೀಡಿದರು. ರಾಜಧಾನಿ ಬೆಂಗಳೂರು ಸೇರಿದಂತೆ ಮತ್ತಿತರ ಕಡೆ ಮತದಾರರ ಪಟ್ಟಿ […]

ಸಚಿವ ಸ್ಥಾನ ಕೊಡದಿದ್ದರೂ ಓಕೆ, ಅನುದಾನ ಕೊಡಿ ಪ್ಲೀಸ್ : ಬಿಜೆಪಿ ಶಾಸಕರ ಮೊರೆ

ಬೆಂಗಳೂರು, ಅ.23- ಆಡಳಿತಾರೂಢ ಬಿಜೆಪಿ ಶಾಸಕರು ಸಚಿವ ಸ್ಥಾನಕ್ಕಿಂತ ಕ್ಷೇತ್ರಕ್ಕೆ ಅನುದಾನ ಕೊಡಿ ಎಂದು ಮೊರೆ ಇಡುತ್ತಿದ್ದಾರೆ. ಕಳೆದ ಒಂದು ವರ್ಷದಿಂದಲೂ ಸಚಿವ ಸಂಪುಟ ವಿಸ್ತರಣೆ ವಿಚಾರ ನೆನೆಗುದಿಗೆ ಬಿದ್ದಿದೆ. ಈಗ ಸಚಿವ ಸಂಪುಟ ವಿಸ್ತರಣೆ ವಿಚಾರ ಮತ್ತೆ ಚರ್ಚೆಗೆ ಬಂದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ತೆರಳಿ ವರಿಷ್ಠರ ಅನುಮತಿ ಪಡೆದು ಸಂಪುಟ ವಿಸ್ತರಣೆ ಮಾಡುವುದಾಗಿ ಹೇಳಿಕೆ ನೀಡಿದ್ದಾರೆ. ಆದರೂ ಶಾಸಕರಲ್ಲಿ ಮಾತ್ರ ಈ ಹಿಂದೆ ಇದ್ದಂತಹ ಉತ್ಸಾಹವಾಗಲಿ, ಆಸಕ್ತಿಯಾಗಲಿ ಕಂಡುಬರುತ್ತಿಲ್ಲ. ವಿಧಾನಸಭೆ ಚುನಾವಣೆಯ […]

ಓಲಾ, ಊಬರ್ ರದ್ದುಗೊಳಿಸಲು ಆಟೋ ಚಾಲಕರ ಆಗ್ರಹ

ಬೆಂಗಳೂರು,ಅ.11- ಓಲಾ, ಉಬರ್, ರಾಪಿಡೋ ಸಂಸ್ಥೆಗಳಿಂದ ಆಟೋ ಚಾಲಕರ ಜೀವನಕ್ಕೆ ಕುತ್ತು ತಂದಿದ್ದು, ವಾರದೊಳ ಗಾಗಿ ಅನಧಿಕೃತ ಆ್ಯಪ್ಗಳನ್ನು ರದ್ದುಗೊಳಿಸಿ ಸರ್ಕಾರ ದಿಂದಲೇ ನೂತನ ಆ್ಯಪ್ ಜಾರಿಗೆ ತಂದು ಆಟೋ ಚಾಲಕರಿಗೆ ಹಾಗೂ ಪ್ರಯಾಣಿಕರಿಗೆ ಅನುಕೂಲ ಮಾಡಿ ಕೊಡಬೇಕೆಂದು ಬೆಂಗಳೂರು ಆಟೋ ಚಾಲಕರ ಸಂಘಸಂಸ್ಥೆ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅಧ್ಯಕ್ಷ ಎಮ್. ಮಂಜುನಾಥ್, ಸರ್ಕಾರ ಈ ಬಗ್ಗೆ ಗಮನಹರಿಸಿ ಜನಸ್ನೇಹಿ , ಚಾಲಕ ಸ್ನೇಹಿ ಆ್ಯಪ್ನ್ನು ಅಭಿವೃದ್ಧಿಪಡಿಸಿ ಸಹಕಾರಿ ತತ್ವದಡಿ ನಡೆಸಬೇಕು , ಇಲ್ಲದಿದ್ದಲ್ಲಿ […]

ಕೊಡಿಸಿದ್ದ ಸಾಲ ವಾಪಸ್ ಕೇಳಿದ್ದಕ್ಕೆ ವ್ಯಕ್ತಿ ಕೊಲೆ

ಬೆಂಗಳೂರು,ಆ.23-ಬೇರೆಯ ವರಿಂದ ಕೊಡಿಸಿದ್ದ ಸಾಲವನ್ನು ವಾಪಸ್ ಕೊಡುವಂತೆ ಕೇಳಲು ಮನೆ ಬಳಿ ಬಂದಿದ್ದ ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ಮಾರತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವೆಂಕಟೇಶಪ್ಪ(65) ಕೊಲೆಯಾಗಿ ರುವ ವ್ಯಕ್ತಿ. ವೆಂಕಟೇಶಪ್ಪ ಅವರುನಂಜುಂಡರೆಡ್ಡಿ ಮತ್ತು ಪ್ರಕಾಶ್ ಎಂಬುವರಿಂದ 5 ಲಕ್ಷ ಮತ್ತು 6 ಲಕ್ಷ ರೂ.ಗಳಂತೆ ಒಟ್ಟು 11 ಲಕ್ಷ ಹಣವನ್ನು ಮುನಿಕೊಳಲದ ಅಪಾರ್ಟ್‍ಮೆಂಟ್‍ವೊಂದರಲ್ಲಿ ವಾಸವಾಗಿರುವ ಶಿವಪ್ಪನಿಗೆ ಕೊಡಿಸಿದ್ದರು. ಶಿವಪ್ಪ ಸರಿಯಾಗಿ ಸಾಲ ಹಿಂದಿರುಗಿಸಿರಲಿಲ್ಲ. ವೆಂಕಟೇಶಪ್ಪ ಈ ವಿಷಯ ತಿಳಿದು, ಕಳೆದ ಶನಿವಾರ ನಂಜುಂಡ ರೆಡ್ಡಿ […]

ಮೋದಿ ರಾಜ್ಯ ಭೇಟಿಗೂ ಮುನ್ನ ಬಿಹಾರಕ್ಕೆ ವಿಶೇಷ
ಸ್ಥಾನ ಮಾನದ ಬೇಡಿಕೆ

ಪಾಟ್ನಾ, ಜು 12 – ಬಿಹಾರ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೂ ಮುನ್ನ ವಿಶೇಷ ವರ್ಗದ ಸ್ಥಾನಮಾನದ ಬೇಡಿಕೆಯನ್ನು ದೊಸ್ತಿ ಸರ್ಕಾರದ ಪಲುದಾರ ಜೆಡಿಯು ಹೊಸ ಪಟ್ಟಿ ಮುಂಡಿಸಿದೆ. ಸಂಸದೀಯ ಮಂಡಳಿ ಮುಖ್ಯಸ್ಥ ಉಪೇಂದ್ರ ಕುಶ್ವಾಹ ಅವರು ಸುದೀರ್ಘವಾಗಿ ಫೇಸ್ಬುಕ್‍ನಲ್ಲಿ ಬೇಡಿಕೆಯನ್ನು ಎತ್ತಿದ್ದಾರೆ. ಸೈದ್ಧಾಂತಿಕ ಭಿನ್ನಾಭಿಪ್ರಾಯಗಳ ಹೊರತಾಗಿಯೂ ಬಿಜೆಪಿಯೊಂದಿಗಿನ ತಮ್ಮ ಪಕ್ಷದ ಹಳೆಯ ಸಂಬಂಧವನ್ನು ಮೋದಿಗೆ ನೆನಪಿಸಿದ್ದಾರೆ. ಪ್ರಧಾನಿ ಮೋದಿ ಅವರು ಇಂದು ಸಂಜೆ ಬಿಹಾರದ ರಾಜಧಾನಿಗೆ ಆಗಮಿಸುತ್ತಿದ್ದು ,ಇದರ ನಡುವೆ ತಮ್ಮ ಪಕ್ಷಕ್ಕೆ […]

ಅತಿಥಿ ಉಪನ್ಯಾಸಕರ ಖಾಯಂಗೆ ಆಗ್ರಹ

ಬೆಂಗಳೂರು, ಜ.5- ಪದವಿ ಹಾಗೂ ಪಿಯುಸಿ ಕಾಲೇಜುಗಳ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವುದಾಗಿ ಸರ್ಕಾರ ಘೋಷಣೆ ಮಾಡಬೇಕೆಂದು ವಿಧಾನ ಪರಿಷತ್ ಸದಸ್ಯ ಶ್ರೀಕಂಠೇಗೌಡ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅತಿಥಿ ಉಪನ್ಯಾಸಕರು ಕಳೆದ 26 ದಿನಗಳಿಂದ ತರಗತಿ ಬಹಿಷ್ಕರಿಸಿ ಧರಣಿ ಮಾಡುತ್ತಿದ್ದಾರೆ. ಈ ಹಿಂದೆ ಗುತ್ತಿಗೆ, ಅರೆಕಾಲಿಕ ಉಪನ್ಯಾಸಕರನ್ನು ಖಾಯಂಗೊಳಿಸಿರುವ ನಿದರ್ಶನವಿದೆ. ಹೀಗಾಗಿ ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ ಮಾಡುವುದು ಪರಿಹಾರವಲ್ಲ. ಅವರಿಗೆ ಸೇವಾ ಭದ್ರತೆ ನೀಡಬೇಕು ಎಂದರು. ರಾಜ್ಯದಲ್ಲಿ 2.86 ಲಕ್ಷ ವಿವಿಧ ಹುದ್ದೆಗಳು ಖಾಲಿ ಇವೆ. […]