ವರಿಷ್ಠರ ಭೇಟಿಗೆ ಸಮಯ ಕೇಳಿದ್ದೇನೆ, ಶೀಘ್ರದಲ್ಲೇ ಸಂಪುಟ ವಿಸ್ತರಣೆ : ಸಿಎಂ

ಬೆಂಗಳೂರು,ಜ.28- ಸಂಪುಟ ವಿಸ್ತರಣೆ ಸಂಬಂಧ ವರಿಷ್ಠರ ಭೇಟಿಗೆ ಸಮಯ ಕೇಳಿದ್ದೇನೆ. ಅವಕಾಶ ಸಿಕ್ಕ ಕೂಡಲೇ ದೆಹಲಿಗೆ ತೆರಳಿ ಅವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿಲ್ಲಿ ಹೇಳಿದರು. ತಮ್ಮ ಹುಟ್ಟುಹಬ್ಬ ಹಾಗೂ 6 ತಿಂಗಳು ಆಡಳಿತ ಪೂರೈಸಿದ ಅಂಗವಾಗಿ ಇಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಯಡಿಯೂರಪ್ಪನವರು ನನಗೆ ಆಶೀರ್ವಾದ ಮಾಡಿದ್ದಾರೆ. ಅಲ್ಲದೆ ಒಳ್ಳೆಯ ಆಡಳಿತ ನೀಡಿದ್ದೀರಿ. ಹೀಗೆ ಮುಂದುವರೆಯಿರಿ ಎಂದು ಹಾರೈಸಿದ್ದಾರೆ […]