ಜಾರ್ಖಂಡ್‍ನಲ್ಲಿ 16,800 ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಗಳನ್ನು ಅನಾವರಣಗೊಳಿಸದ ಪ್ರಧಾನಿ

ದಿಯೋಘರ್,ಜು.12- ಪ್ರಧಾನಿ ನರೇಂದ್ರ ಮೋದಿ ಅವರು ಜಾರ್ಖಂಡ್‍ನಲ್ಲಿಂದು ದಿಯೋಘರ್ ವಿಮಾನ ನಿಲ್ದಾಣ ಉದ್ಘಾಟಿಸುತ್ತಿದ್ದಾರೆ. ಅಲ್ಲದೆ 16,800 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳನ್ನು ಅನಾವರಣಗೊಳಿಸಲಿದ್ದಾರೆ. ದಿಯೋಘರ್‍ನಲ್ಲಿ ನೂತನ ವಿಮಾನ ನಿಲ್ದಾಣ ಸೇರಿದಂತೆ 16,800 ಕೋಟಿ ರೂ.ಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರದ ರಾಜಧಾನಿ ಪಾಟ್ನಾಕ್ಕೆ ತೆರಳಲಿದ್ದಾರೆ. ಇದಕ್ಕೂ ಮುನ್ನ ಮಧ್ಯಾಹ್ನ 2.20ರ ಸುಮಾರಿಗೆ ಜಾರ್ಖಂಡ್‍ನಲ್ಲಿರುವ ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಒಂದಾದ ಬಾಬಾ ಬೈದ್ಯನಾಥ ದೇವಾಲಯಕ್ಕೆ ಭೇಟಿ […]