ಮೇಲ್ಛಾವಣಿ ಕುಸಿದು ಮಗು ಸೇರಿ ಮೂವರ ದುರ್ಮರಣ, ತಲಾ 4 ಲಕ್ಷ ಪರಿಹಾರ ಘೋಷಣೆ

ಲಖ್ನೋ,ಸೆ.19- ಎರಡಂತಸ್ತಿನ ಕಟ್ಟಡದ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಡಿಯೋರಿಯಾ ಜಿಲ್ಲೆಯಲ್ಲಿ ನಡೆದಿದೆ. ಇಂದು ಮುಂಜಾನೆ 3 ಗಂಟೆ ಸುಮಾರಿನಲ್ಲಿ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಎರಡು ವರ್ಷದ ಹೆಣ್ಣು ಮಗು ಸೇರಿದಂತೆ ದಿಲೀಪ್(35) ಮತ್ತು ಚಾಂದಿನಿ(30) ದಂಪತಿ ಮೃತಪಟ್ಟಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ರಕ್ಷಣೆ ಕಾರ್ಯಾಚರಣೆ ನಡೆಸಿ ಅವಶೇಷಗಳಡಿ ಸಿಲುಕಿದ್ದ ಮೃತ ದೇಹಗಳನ್ನು ಹೊರತೆಗೆದಿದ್ದಾರೆ ಎಂದು ಎಸ್‍ಎಂಡಿ ಸೌರಬ್ ಸಿಂಗ್ ತಿಳಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಅಕ್ಕಪಕ್ಕದ ಮನೆಗಳನ್ನು ತೆರವು […]