ಠೇವಣಿ ಸಂಗ್ರಹಿಸಿ ವಂಚಿಸುವ ಕಂಪನಿಗಳ ವಿರುದ್ಧ ಕಠಿಣ ಕ್ರಮ: ಅಶೋಕ್

ಬೆಂಗಳೂರು,ಡಿ.12- ಹೆಚ್ಚಿನ ಬಡ್ಡಿ ನೀಡುವ ಆಮಿಷವೊಡ್ಡಿ ಸಾರ್ವಜನಿಕರಿಂದ ಠೇವಣಿ ಸಂಗ್ರಹಿಸಿ ವಂಚಿಸುವಂತಹ ಕಂಪನಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚೈನ್ ಲಿಂಕ್ ಮೂಲಕ ಅಮಾಯಕರನ್ನು ವಂಚಿಸುವಂತಹ ಸಂಸ್ಥೆಗಳ ವಿರುದ್ಧವೂ ಕಾನೂನು ಕ್ರಮ ಜರುಗಿಸಲಾಗುವುದು. ಈ ವಂಚನೆಗೊಳಗಾಗುವವರ ದೂರುಗಳ ಪರಿಶೀಲನೆಗೆ ಪ್ರತ್ಯೇಕವಾದ ವಿಭಾಗದ ಅವಶ್ಯಕತೆ ಇದೆ. ತಮಿಳುನಾಡಿನಲ್ಲಿ ಈ ಸಂಬಂಧ ಕಟ್ಟುನಿಟ್ಟಿನ ಕಾಯ್ದೆ ಜಾರಿಗೆ ತಂದಿರುವ ಮಾಹಿತಿ ಇದ್ದು ಅದೇ ಮಾದರಿಯಲ್ಲಿ ರಾಜ್ಯದಲ್ಲೂ ಅನುಷ್ಠಾನಗೊಳಿಸುವ ಗಂಭೀರ ಚಿಂತನೆ […]