ಸಿಬಿಐ ವಿಚಾರಣೆಗೆ ಗೈರಾದ ತೇಜಸ್ವಿಯಾದವ್

ನವದೆಹಲಿ,ಮಾ.11-ಸಿಬಿಐ ಎದುರು ವಿಚಾರಣೆಗೆ ಹಾಜರಾಗಲು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಮತ್ತೆ ನಿರಾಕರಿಸಿದ್ದಾರೆ. ಜಮೀನು ಮತ್ತು ಉದ್ಯೋಗಕ್ಕಾಗಿ ಹಗರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೋಟೀಸ್ ನೀಡಿತ್ತು ಆದರೂ ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಇಂದು ವಿಚಾರಣೆಗೆ ಹಾಜರಾಗಿಲ್ಲ. ಈ ಹಿಂದೆ ಮಾರ್ಚ್ 4 ರಂದು ಯಾದವ್ ಅವರನ್ನು ವಿಚಾರಣೆಗೆ ಕರೆಯಲಾಗಿತ್ತು ಆದರೆ ಅವರು ಸಿಬಿಐ ಅಧಿಕಾರಿಗಳ ಮುಂದೆ ಹಾಜರಾಗಿರಲಿಲ್ಲ, ನಂತರ ಇಂದಿಗೆ ಹೊಸ ದಿನಾಂಕ ನಿಗದಿಪಡಿಸಿದ್ದರು ಅವರು ವಿಚಾರಣೆಗೆ ಬಂದಿಲ್ಲ. […]