ಕೆಪಿಸಿಸಿ ಕಚೇರಿಯಲ್ಲಿ ಧ್ರುವನಾರಾಯಣ್‍ಗೆ ಶ್ರದ್ಧಾಂಜಲಿ

ಬೆಂಗಳೂರು,ಮಾ.11- ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ನಿಧನದ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನೆಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಿ, ಕೆಪಿಸಿಸಿ ಕಚೇರಿಯಲ್ಲಿಂದು ಶ್ರದ್ಧಾಂಜಲಿ ಸಭೆ ನಡೆಸಿದೆ. ಶ್ರದ್ಧಾಂಜಲಿ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ಕಾಂಗ್ರೆಸ್ ಕುಟುಂಬಕ್ಕೆ ಧ್ರವನಾರಾಯಣ್‍ರ ಅಗಲುವಿಕೆ ಭರಿಸಲಾಗದ ನಷ್ಟವಾಗಿದೆ. ಅವರು ತಮಗೆ ವಹಿಸಿದ್ದ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸುತ್ತಿದ್ದರು. ಪಕ್ಷ ಸಂಘಟನೆಯಲ್ಲಿ ಬದ್ಧತೆಯಿದ್ದ ರಾಜಕಾರಣಿ, ಅವರ ಕಾರ್ಯವೈಖರಿ ಪಕ್ಷದ ಎಲ್ಲರಿಗೂ ಮಾದರಿಯಾಗಿದೆ ಎಂದರು. ಎಐಸಿಸಿ ಅಧ್ಯಕ್ಷರಾಗಿದ್ದ ಮಲ್ಲಿಕಾರ್ಜುನ ಖರ್ಗೆ, ಸಂಸದ ಶ್ರೀನಿವಾಸ ಪ್ರಸಾದ್ ಮತ್ತು ನಾನು ಬಲವಂತವಾಗಿ ಅವರನ್ನು […]