ಶಾಲೆಗಳಲ್ಲಿ ಧ್ಯಾನ ವಿರೋಧಿಸಿದ ಸಿದ್ದುಗೆ ಸಚಿವ ಬಿ.ಸಿ.ನಾಗೇಶ್ ತಿರುಗೇಟು

ಬೆಂಗಳೂರು,ನ.5-ಶಾಲಾಕಾಲೇಜುಗಳಲ್ಲಿ ಹತ್ತು ನಿಮಿಷ ಧ್ಯಾನ ಕಡ್ಡಾಯಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿದ್ದ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ಸಚಿವ ಬಿ.ಸಿ.ನಾಗೇಶ್ ತಿರುಗೇಟು ನೀಡಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಸಂಶೋಧಕರು, ವೈದ್ಯರು, ವಿಜ್ಞಾನಿಗಳ ಪ್ರಕಾರ, ಯೋಗ ಮತ್ತು ಧ್ಯಾನ ಮಾಡುವುದು ದೈಹಿಕ, ಮಾನಸಿಕ ಆರೋಗ್ಯಕ್ಕೆ ಅತ್ಯಂತ ಉಪಯುಕ್ತ. ಆದರೆ, ನೀವು ಮಾತ್ರ ಧ್ಯಾನ, ಯೋಗ ಮಾಡಿದರೆ ಮಕ್ಕಳು ಕುಗ್ಗಿ ಹೋಗುತ್ತಾರೆ ಎನ್ನುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದಿದ್ದಾರೆ. ನಿಮ್ಮ ಅಧಿವಯಲ್ಲಿ ಶಿಕ್ಷಣ ಇಲಾಖೆಯಲ್ಲಿ ಸುಧಾರಣೆ, ಅಭಿವೃದ್ಧಿ ಕಾರ್ಯಗಳನ್ನು ನೀವು […]