ಮದುವೆ ಮುಗಿಸಿ ಬರುತ್ತಿದ್ದ ವಾಹನ ಪ್ರಪಾತಕ್ಕೆ ಬಿದ್ದು 11 ಜನರ ದುರ್ಮರಣ..!

ಖಾತಿಮಾ (ಉತ್ತರಾಖಂಡ), ಫೆ.22- ಮದುವೆ ಸಂಭ್ರಮ ಮುಗಿಸಿ ಹಿಂದಿರುಗುತ್ತಿದ್ದ ವಾಹನವೊಂದು ಪ್ರಪಾತಕ್ಕೆ ಬಿದ್ದ ಪರಿಣಾಮ 11 ಮಂದಿ ದಾರುಣವಾಗಿ ಮೃತಪಟ್ಟ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ 3 ಗಂಟೆ ಸುಮಾರಿನಲ್ಲಿ ವಾಪಸಾಗುತ್ತಿದ್ದ ವೇಳೆ ಮ್ಯಾಕ್ಸ್ ವಾಹನ ಚಂಪವಾತ್ ಜಿಲ್ಲೆಯ ಸುಖೀಗಾನ್ ದಂಡಮಿನಾರ್ ರಸ್ತೆಯಲ್ಲಿ ಅಪಘಾತ ಸಂಭವಿಸಿ ಆಳವಾದ ಕಮರಿಗೆ ಬಿದ್ದಿದೆ. ಈ ಸಂದರ್ಭದಲ್ಲಿ 11ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿ ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ. ಮೃತರೆಲ್ಲರೂ ಚಂಪಾವಾತ್ ಜಿಲ್ಲೆಯ ಕನಕಪುರದ ನಿವಾಸಿಗಳು ಎಂದು ಗುರುತಿಸಲಾಗಿದೆ.  ಮಾಹಿತಿ […]