ನಾಳೆಯಿಂದ ಬೆಂಗಳೂರಿನಲ್ಲಿ ಡಿಜಿಟಲ್ ರುಪಿ ಚಲಾವಣೆ

ನವದೆಹಲಿ,ನ.30- ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಈಗಾಗಲೇ ಪ್ರಕಟಿಸಿರುವಂತೆ ಡಿಜಿಟಲ್ ರುಪಿ ನಾಳೆಯಿಂದ ದೇಶದ ಆಯ್ದ ನಗರಗಳಲ್ಲಿ ಪ್ರಾಯೋಗಿಕವಾಗಿ ಚಲಾವಣೆಗೆ ಬರಲಿದೆ. ದೇಶದ ಆರ್ಥಿಕತೆಯಲ್ಲಿ ಮಹತ್ವದ ಪಾತ್ರ ನಿರ್ವಹಿಸಲಿದೆ ಎಂದು ಹೇಳಲಾದ ಡಿಜಿಟಲ್ ರುಪಿಯನ್ನು ಪ್ರಥಮ ಹಂತದಲ್ಲಿ 4 ಬ್ಯಾಂಕ್‍ಗಳು ಅನುಷ್ಠಾನಕ್ಕೆ ತರುತ್ತಿದೆ. ಕ್ರಿಪ್ಟೊ ಕರೆನ್ಸಿ ಮಾದರಿಯಲ್ಲಿರುವ ಡಿಜಿಟಲ್ ರುಪಿ ಸಾಂಪ್ರದಾಯಿಕ ನೋಟು ಮತ್ತು ನಾಣ್ಯಗಳ ಮುಖಬೆಲೆಯನ್ನೇ ಹೊಂದಿರಲಿದೆ. ನಾಳೆ ಚಿಲ್ಲರೆ ಕ್ಷೇತ್ರದಲ್ಲಿ ಚಲಾವಣೆ ಮಾಡಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಐಸಿಐಸಿಐ ಬ್ಯಾಂಕ್, ಎಸ್ […]

ಡಿಜಿಟಲ್ ಮಾಧ್ಯಮಕ್ಕೆ ಬೀಳಲಿದೆ ಕಡಿವಾಣ

ಜೈಪುರ,ನ.24- ಡಿಜಿಟಲ್ ಹಾಗೂ ವಿದ್ಯುನ್ಮಾನ ಮಾಧ್ಯಮಗಳಿಗೆ ನಿಯಂತ್ರಣ ಹಾಕಲಾಗುವುದು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ. ಈ ಹಿಂದೆ ಸುದ್ದಿಗಳು ಏಕಮುಖವಾಗಿದ್ದವು, ಆದರೆ, ಇತ್ತಿಚೆಗೆ ಡಿಜಿಟಲ್ ಮಾಧ್ಯಮ ಬಿತ್ತರಿಸುವ ಸುದ್ದಿಗಳು ಬಹು ಆಯಾಮಗಳನ್ನು ಹೊಂದಿರುವುದರಿಂದ ಅವುಗಳ ನಿಯಂತ್ರಣಕ್ಕೆ ಶೀಘ್ರ ಮಸೂದೆ ಮಂಡಿಸಲಾಗುವುದು ಎಂದು ಅವರು ಹೇಳಿದ್ದಾರೆ. ಡಿಜಿಟಲ್ ಮಾಧ್ಯಮವು ಅವಕಾಶಗಳನ್ನು ಮತ್ತು ಸವಾಲುಗಳನ್ನು ಹೊಂದಿವೆ. ಅವುಗಳ ಸಮತೋಲನಕ್ಕೆ ಏನು ಮಾಡಬಹುದು ಎಂಬ ಬಗ್ಗೆ ನಾವು ಚಿಂತಿಸುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ. […]

ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಡಿಜಿಟಲ್ ಹುಂಡಿ ಉದ್ಘಾಟನೆ

ಮೈಸೂರು, ಆ.26- ಡಿಜಿಟಲ್ ಪೇಮೆಂಟ್ ಜನಪ್ರಿಯ ಮತ್ತು ಅನಿವಾರ್ಯವಾಗುತ್ತಿರುವ ಇಂದಿನ ದಿನಗಳಲ್ಲಿ ಭಕ್ತರ ಅನುಕೂಲಕ್ಕಾಗಿ ಧಾರ್ಮಿಕ ದತ್ತಿ ಇಲಾಖೆಯು ಚಾಮುಂಡೇಶ್ವರಿ ದೇವಸ್ಥಾನದ ಕ್ಯೂಆರ್ ಕೋಡ್ ಸಹಿತ ಇ-ಹುಂಡಿ ಬಿಡುಗಡೆ ಮಾಡಿದ್ದು, ಅಪರ ಜಿಲ್ಲಾಧಿಕಾರಿ ಡಾ ಬಿ.ಎಸ್. ಮಂಜುನಾಥಸ್ವಾಮಿ ಇ -ಹುಂಡಿಯನ್ನು ಉದ್ಘಾಟಿಸಿದರು. ಧಾರ್ಮಿಕ ದತ್ತಿ ಇಲಾಖೆ, ಕರ್ನಾಟಕ ಗ್ರಾಮೀಣ ಬ್ಯಾಂಕ್ ಹಾಗೂ ಚಾಮುಂಡಿಬೆಟ್ಟ ಶಾಖೆಯ ಸಹಯೋಗದಲ್ಲಿ ಚಾಮುಂಡೇಶ್ವರಿ ದೇವಿಯ ಭಕ್ತರು, ಕಾಣಿಕೆ ಸಲ್ಲಿಕೆಯನ್ನು ಡಿಜಿಟಲ್ ಪೇಮೆಂಟ್ ಮೂಲಕವೂ ಮಾಡಲು ಅನುಕೂಲವಾಗುವಂತೆ ಕ್ಯೂಆರ್ ಕೋಡ್ ಸಹಿತ ಇ-ಹುಂಡಿ ಬಿಡುಗಡೆ […]

ಆರೋಗ್ಯ ತುರ್ತು ಪರಿಸ್ಥಿತಿ ನಿರ್ವಹಣೆಗೆ ಡಿಜಿಟಲ್ ಹೆಲ್ತ್ ಯೋಜನೆ

ಬೆಂಗಳೂರು, ಆ.6- ಜಾಗತಿಕ ಸಾಂಕ್ರಾಮಿಕ ಕೋವಿಡ್-19 ಸಮಯದಲ್ಲಿ ಶ್ರಮಿಕ ವರ್ಗ ಮತ್ತು ಅವರ ಕುಟುಂಬ ವರ್ಗದವರು ತುರ್ತು ಪರಿಸ್ಥಿತಿಯಲ್ಲಿ ವೈದ್ಯರನ್ನು ತಲುಪಲಾಗದೆ ಪರದಾಡಿದ ಸಂದರ್ಭ ಮರುಕಳಿಸದಂತೆ ತಡೆಯುವ ಸಲುವಾಗಿ ರಾಜ್ಯ ಕಾರ್ಮಿಕ ಇಲಾಖೆ ಮಹತ್ವದ ಹೆಜ್ಜೆ ಇರಿಸಿದ್ದು, ಶ್ರಮಿಕ ವರ್ಗಕ್ಕೆ ವೈದ್ಯಕೀಯ ಸೇವೆಗಳನ್ನು ಇನ್ನಷ್ಟು ಹತ್ತಿರವಾಗಿಸಲು ಮುಂದಡಿ ಇರಿಸಿದೆ. ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಅವರು ಡಿಜಿಟಲ್ ಟೆಲಿ ಹೆಲ್ತ್ ಮತ್ತು ಟೆಲಿ ಮೆಡಿಸನ್ ಸೇವೆಗಳನ್ನು ಪ್ರಾಯೋಗಿಕವಾಗಿ ಜಾರಿಗೊಳಿಸುವ ಸಂಬಂಧ ರೈಲ್‍ಟೆಲ್ ಕಾಪೆರ್ರೇಷನ್ ಆಫ್ ಇಂಡಿಯಾ ಜತೆ […]

ಡಿಜಿಟಲ್ ಪರಿವರ್ತನೆ ಮಹಿಳಾ ಉದ್ಯಮಿಗಳಿಗೆ ಹೊಸ ದಾರಿ: ಬೊಮ್ಮಾಯಿ

ಬೆಂಗಳೂರು,ಆ.2- ದೇವರು ಎಲ್ಲವನ್ನೂ ಸೃಷ್ಟಿಸಲು ಸಾಧ್ಯವಿಲ್ಲವೆಂದು, ಮಹಿಳೆಯರನ್ನು ಸೃಷ್ಟಿಸಿದ. ಜೊತೆಯಲ್ಲಿ ಮಹಿಳೆಯರಿಗೆ ಸೃಷ್ಟಿಸುವ ಪರಮಾಧಿಕಾರವನ್ನು ದೇವರು ನೀಡಿದ್ದಾನೆ, ಮಹಿಳೆಯರು ಏನು ಬೇಕಾದರೂ ಸೃಷ್ಟಿಸುವ ಶಕ್ತಿ ಹೊಂದಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸ್ವಸಹಾಯ ಸಂಘದ ಮೂಲಕ ಇಂದು ರಾಜ್ಯದ ಮಹಿಳೆಯರು ಬೆಳೆಸುತ್ತಿರುವ ಕಿರು ಉದ್ದಿಮೆಗಳಿಗೆ ಡಿಜಿಟಲ್ ತರಬೇತಿ ನೀಡುವ ಮೂಲಕ ಮಾರುಕಟ್ಟೆ ವ್ಯವಸ್ಥೆಯನ್ನು ಜಾಗತಿಕ ವಿಸ್ತರಿಸುವ ಕಾರ್ಯವನ್ನು UBUNTU & UNESCAP ಮಾಡುತ್ತಿದೆ ಎಂದು ತಿಳಿಸಿದರು. ನಗರದ ಖಾಸಗಿ ಹೋಟೆಲ್‍ನಲ್ಲಿ UBUNTU & UNESCAP ಸಹಯೋಗದಲ್ಲಿ […]