ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿಗ್ವಿಜಯ್ ಸಿಂಗ್..?

ನವದೆಹಲಿ,ಸೆ.29-ಐತಿಹಾಸಿಕ ಹಿನ್ನೆಲೆಯುಳ್ಳ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಸ್ರ್ಪಧಿಸಲು ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ನಾಮಪತ್ರ ಪಡೆದುಕೊಂಡಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರಗಳ ಸಲ್ಲಿಕೆಯಾಗಲಿದೆ. ಅ.1ರಂದು ನಾಮಪತ್ರಗಳ ಪರಿಶೀಲನೆಯಾಗಲಿದ್ದು, ನಾಮಪತ್ರ ಹಿಂಪಡೆಲು ಅ.8 ಕೊನೆಯ ದಿನವಾಗಿದೆ. ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರೆ ಅ.17ರಂದು ಬೆಳಗ್ಗೆ 10ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಅ.19ರಂದು ಫಲಿತಾಂಶ ಪ್ರಕಟವಾಗಲಿದೆ. ಪಕ್ಷದ ನೂತನ ಅಧಿನಾಯಕನ ಆಯ್ಕೆಗಾಗಿ ನಡೆಯುತ್ತಿರುವ ಈ […]