ಆಸ್ಪತ್ರೆಯಿಂದ ದೇವೇಗೌಡರು ಡಿಸ್ಚಾರ್ಜ್

ಬೆಂಗಳೂರು,ಮಾ.6- ಆರೋಗ್ಯ ತಪಾಸಣೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಇಂದು ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ಕಳೆದ ಐದು ದಿನಗಳ ಹಿಂದೆ ಕಾಲು ನೋವು ಹಾಗೂ ಮಂಡಿ ನೋವು ಹೆಚ್ಚಾದ ಹಿನ್ನಲೆಯಲ್ಲಿ ಆರೋಗ್ಯ ತಪಾಸಣೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಸಾಮಾನ್ಯ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿ ವಿವಿಧ ಪರೀಕ್ಷೆಗಳನ್ನು ಮಾಡಿದ ಬಳಿಕ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಗೆ ದಾಖಲಾದ ದಿನವೇ ಟ್ವೀಟ್ ಮಾಡಿದ ದೇವೇಗೌಡರು, ರೋಟಿನ್ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, […]