ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗೆ ಅವಕಾಶ ನೀಡುತ್ತಿಲ್ಲ: ಪ್ರಿಯಾಂಕ ಖರ್ಗೆ

ಬೆಳಗಾವಿ,ಡಿ.29-ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗೆ ರಾಜ್ಯ ಸರ್ಕಾರ ಅವಕಾಶ ನೀಡುತ್ತಿಲ್ಲ ಎಂದು ಶಾಸಕ ಪ್ರಿಯಾಂಕ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಉತ್ತರ ಕರ್ನಾಟಕ ಹತ್ತು ಹಲವು ಸಮಸ್ಯೆಗಳನ್ನು ಚರ್ಚೆ ಮಾಡಲು ಸದನವನ್ನು ಮೊಟಕುಗೊಳಿಸುವುದು ಬೇಡ ಎಂದು ಒತ್ತಾಯಿಸಿದರು. ಮುಖ್ಯಮಂತ್ರಿಗಳು ದೆಹಲಿ ಪ್ರವಾಸದ ನಂತರ ಅಧಿವೇಶನವನ್ನು ಮೊಟಕುಗೊಳಿಸುವ ತೀರ್ಮಾನ ಮಾಡಲಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು. ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಧ್ವನಿ ಎತ್ತಲಿಲ್ಲ ಎನ್ನುವ ಆರೋಪವನ್ನು ನಿರಾಕರಿಸಿದ ಅವರು, ರೈತರ ಸಮಸ್ಯೆ ವಿಚಾರ ಅಧಿವೇಶನದ […]

ಆ.10ರಂದು ಸಚಿವ ಸಂಪುಟ ಸಭೆ, ಮಳೆ ಹಾನಿ ಪರಿಹಾರ ಚರ್ಚೆ

ಬೆಂಗಳೂರು,ಆ.6- ರಾಜ್ಯಾದ್ಯಂತ ಭಾರೀ ಮಳೆಯಿಂದ ಕೃಷಿ, ರಸ್ತೆಗಳು ಮತ್ತು ಇತರ ಮೂಲಸೌಕರ್ಯಗಳಿಗೆ ಆಗಿರುವ ಹಾನಿಯಿಂದ ಉಂಟಾದ ಸಮಸ್ಯೆಗಳ ಪರಿಹಾರಕ್ಕಾಗಿ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಚರ್ಚೆ ನಡೆಸಲು ಆ.10ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಜೂನ್ ಮೊದಲ ವಾರ ಮತ್ತು ಜುಲೈ 16ರ ನಡುವೆ 5,771 ಹೆಕ್ಟೇರ್ ಕೃಷಿ ಭೂಮಿ ಮತ್ತು ಜುಲೈ 16 ಮತ್ತು ಆಗಸ್ಟ್ 2ನೇ ವಾರದ ನಡುವೆ 10,984 ಹೆಕ್ಟೇರ್ ಭೂಮಿ ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾಗಿದೆ ಎಂದು ರಾಜ್ಯದ್ಯಾಂತ ಮಳೆ […]