ಕೂಡಲೇ ಮಹಾರಾಷ್ಟ್ರ ಸರ್ಕಾರ ವಜಾ ಮಾಡುವಂತೆ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು,ಮಾ.15- ಒಕ್ಕೂಟ ವ್ಯವಸ್ಥೆಗೆ ಬೆದರಿಕೆ ಒಡ್ಡುತ್ತಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರವನ್ನು ಕೇಂದ್ರ ಸರ್ಕಾರ ಕೂಡಲೇ ವಜಾ ಮಾಡಬೇಕು, ರಾಜ್ಯದ ಹಿತ ಕಾಯುವಲ್ಲಿ ವಿಫಲವಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಹುಬ್ಬಳ್ಳಿಯಲ್ಲಿಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಹಾರಾಷ್ಟ್ರ ಸರ್ಕಾರ ಕರ್ನಾಟಕದ ಗಡಿಯೊಳಗೆ ಇರುವ 865 ಹಳ್ಳಿಗಳಿಗೆ ಮಹಾತ್ಮ ಜ್ಯೋತಿಬಾ ಫುಲೆ ಜನ ಆರೋಗ್ಯ ಯೋಜನೆ ಎಂಬ ಆರೋಗ್ಯ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲು […]