ಕಾಲಮಿತಿಯೊಳಗೆ ಕಡತ ವಿಲೇವಾರಿ ಮಾಡುವಂತೆ ಸಿಎಂ ಎಚ್ಚರಿಕೆ

ಬೆಂಗಳೂರು,ನ.12- ಕಾಲಮಿತಿಯೊಳಗೆ ಕಡತಗಳನ್ನು ವಿಲೇವಾರಿ ಮಾಡದಿದ್ದರೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ಕೊಟ್ಟಿದ್ದಾರೆ. ತಮ್ಮೆಲ್ಲ ಕಾರ್ಯಕ್ರಮಗಳನ್ನು ಬದಿಗೊತ್ತಿ ರೇಸ್‍ಕೋರ್ಸ್ ರಸ್ತೆಯಲ್ಲಿರುವ ಸರ್ಕಾರಿ ನಿವಾಸದಲ್ಲಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರು, ಕಡತಗಳು ವಿಳಂಬವಾಗುತ್ತಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಮುಖ್ಯಮಂತ್ರಿಗಳ ಅಧಿಕೃತ ಕಚೇರಿ ಕೃಷ್ಣಾದಲ್ಲೇ ಪ್ರಮುಖ ಇಲಾಖೆಗಳ ಸಾವಿರಾರು ಕಡತಗಳು ಎರಡರಿಂದ ಮೂರು ತಿಂಗಳಾದರೂ ವಿಲೇವಾರಿಯಾಗದೆ ಬಾಕಿ ಉಳಿದಿವೆ. ವರುಣನ ಅಬ್ಬರಕ್ಕೆ ತಮಿಳುನಾಡು ತತ್ತರ, ಶಾಲಾ-ಕಾಲೇಜು […]