ಡಿ.19ರಿಂದ ಚಳಿಗಾಲದ ಅಧಿವೇಶನ, ಸರ್ಕಾರದ ಎಚ್ಚರಿಕೆಯ ಹೆಜ್ಜೆ

ಬೆಂಗಳೂರು,ಡಿ.2- ಡಿಸೆಂಬರ್ 19ರಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಹಿನ್ನೆಲೆ ಈ ಬಾರಿಯ ಅಧಿವೇಶನದಲ್ಲಿ ಕಾವೇರಿದ ವಾತಾವರಣ ಸೃಷ್ಟಿಯಾಗುವ ಸಾಧ್ಯತೆಗಳಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರ ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಕಳೆದ ಬಾರಿ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆದಿತ್ತು. ಆದರೆ ಅಧಿವೇಶನದ ಸಂದರ್ಭದಲ್ಲಿ ಎಂಇಎಸ್ ಪುಂಡಾಟಿಕೆ ನಡೆಸಿತ್ತು. ಬೆಳಗಾವಿಯಲ್ಲಿ ರಾಯಣ್ಣ ಪ್ರತಿಮೆಗೆ ಹಾನಿ ಹಾಗೂ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟ ವಿಚಾರವಾಗಿ ವಿಧಾನಸಭೆಯಲ್ಲಿ ದೊಡ್ಡಮಟ್ಟದ ಚರ್ಚೆಗೆ […]

ಗಡಿ ವಿವಾದ ಸಮರ್ಥ ವಾದಕ್ಕೆ ಸಿದ್ಧ: CM ಬೊಮ್ಮಾಯಿ

ನವದೆಹಲಿ,ನ.29- ಗಡಿ ವಿವಾದ ಕುರಿತಂತೆ ಸುಪ್ರೀಂಕೋರ್ಟ್‍ನಲ್ಲಿ ಸಮರ್ಥವಾದ ವಾದ ಮಂಡಿಸಲು ಎಲ್ಲ ರೀತಿಯ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಹಿರಿಯ ವಕೀಲ ಮುಕುಲ್ ರೋಹ್ಟಗಿ ಅವರನ್ನು ಭೇಟಿಯಾದ ನಂತರ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧ ಪಟ್ಟಂತೆ ರಾಜ್ಯದ ಅಡ್ವೋಕೇಟ್ ಜನರಲ್ ಎಲ್ಲ ವಿವರವನ್ನು ವಿವರಿಸಿದ್ದಾರೆ. ಗಡಿ ವಿವಾದದ ಕಾನೂನಾತ್ಮಕ ಹಿನ್ನೆಲೆ ಬಗ್ಗೆ ರೋಹ್ಟಗಿ ಅವರಿಗೆ ಮಾಹಿತಿ ನೀಡಿರುವುದಾಗಿ ಹೇಳಿದರು.ನಾಳೆ ಸುಪ್ರೀಂಕೋರ್ಟ್‍ನಲ್ಲಿ ವಿಚಾರಣೆ ನಡೆಯಲಿದ್ದು, ರಾಜ್ಯದ […]

ಮಹಾರಾಷ್ಟ್ರ ಸಚಿವರು ಬೆಳಗಾವಿ ಪ್ರವೇಶಿಸಿದರೆ ತಕ್ಕ ಪಾಠ: ಕರವೇ ಎಚ್ಚರಿಕೆ

ಬೆಳಗಾವಿ,ನ.29- ಬೆಳಗಾವಿಯ ಮುಗ್ದ ಮರಾಠಿ ಭಾಷಿಕರನ್ನು ಕನ್ನಡಿಗರ ವಿರುದ್ದ ಎತ್ತಿಕಟ್ಟಿ, ಭಾಷಾ ವೈಷಮ್ಯದ ವಿಷ ಬೀಜ ಬಿತ್ತಲು ಬೆಳಗಾವಿಗೆ ಆಗಮಸುತ್ತಿರುವ ಮಹಾರಾಷ್ಟ್ರದ ಇಬ್ಬರು ಸಚಿವರಿಗೆ ಕಡಿವಾಣ ಹಾಕದಿದ್ದರೆ ನಮ್ಮ ಕಾರ್ಯಕರ್ತರೇ ಅವರಿಗೆ ಪಾಠ ಕಲಿಸಬೇಕಾಗುತ್ತದೆ ಎಂದು ಕರವೇ ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸರುವ ಕರವೇ ಈ ವಿಚಾರದಲ್ಲಿ ಕರ್ನಾಟಕ ಸರ್ಕಾರ ಕೂಡಲೇ ಕ್ರಮ ಜರುಗಿಸಬೇಕು ಮಹಾರಾಷ್ಟ್ರ ಸರ್ಕಾರ ಭಾರತದ ಒಕ್ಕೂಟದ ವ್ಯವಸ್ಥೆಗೆ ಧಕ್ಕೆ ತರುವ […]

ಗಡಿವಿವಾದ : ಕಾನೂನು ತಜ್ಞರ ಜತೆ ಸಿಎಂ ಸಭೆ

ಬೆಂಗಳೂರು,ನ.27- ಕರ್ನಾಟಕ ಮತ್ತು ಮಹಾರಾಷ್ಟ್ರದ ನಡುವೆ ಉಂಟಾಗಿರುವ ಗಡಿ ವಿವಾದವನ್ನು ಸುಪ್ರೀಂಕೋರ್ಟ್‍ನಲ್ಲಿ ಸಮರ್ಪಕವಾಗಿ ಕಾನೂನು ಹೋರಾಟ ನಡೆಸುವ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಅವರು ಸಂಜೆ ಕಾನೂನು ತಜ್ಞರ ಸಭೆ ಕರೆದಿದ್ದಾರೆ. ಸಂಜೆ 7 ಗಂಟೆಗೆ ರೇಸ್‍ಕೋರ್ಸ್ ರಸ್ತೆಯ ನಿವಾಸದಲ್ಲಿ ನಡೆಯಲಿರುವ ಸಭೆಗೆ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವಡಗಿ, ಗಡಿ ಮತ್ತು ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಿವರಾಜ್ ವಿ.ಪಾಟೀಲ್ ಸೇರಿದಂತೆ ರಾಜ್ಯವನ್ನು ಪ್ರತಿನಿಧಿಸುವ ಸುಪ್ರೀಂಕೋರ್ಟ್ ವಕೀಲರು ಕೂಡ ಭಾಗಿಯಾಗಲಿದ್ದಾರೆ. ಗಡಿಯಲ್ಲಿರುವ ಕನ್ನಡ ಮಾತನಾಡುವ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ […]

ಕರ್ನಾಟಕದ ಬಸ್‍ಗಳಿಗೆ ಕಲ್ಲು ತೂರಿ ಮರಾಠಿಗರ ಪುಂಡಾಟ

ಬೆಂಗಳೂರು,ನ.25- ಸದಾ ಗಡಿ ವಿವಾದವನ್ನೇ ಮುಂದಿಟ್ಟುಕೊಂಡು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಮಹಾರಾಷ್ಟ್ರ ಮತ್ತೆ ಪುಂಡಾಟಿಕೆ ಮೆರೆದಿದೆ. ಕರ್ನಾಟಕಕ್ಕೆ ಸೇರಿದ ಸಾರಿಗೆ ಸಂಸ್ಥೆಗಳ ಬಸ್‍ಗಳಮೇಲೆ ಕಲ್ಲು ಎಸೆದಿರುವ ಪುಂಡರು, ಜೈ ಮಹಾರಾಷ್ಟ್ರ, ಕರ್ನಾಟಕದ ಖಾನಾಪುರ, ಬೀದರ್ ಮತ್ತು ಬೆಳಗಾವಿ ನಮ್ಮ ರಾಜ್ಯಕ್ಕೆ ಸೇರಬೇಕೆಂದು ಪುಂಡಾಟಿಕೆ ಮಾಡಿದ್ದಾರೆ. ಪುಣೆ ಜಿಲ್ಲೆಯ ದೌಂಡ್‍ನಲ್ಲಿ ನಿಪಾಣಿ ಔರಂಗಾಬಾದ್ ಬಸ್ ಮೇಲೆ ಜೈ ಮಹಾರಾಷ್ಟ್ರ ಮತ್ತು ಜಾಹಿರ್ ನಿಶೇಧ್ (ಖಂಡನೆ) ಎಂಬ ಪದಗಳನ್ನು ಕಿತ್ತಳೆ ಮತ್ತು ಕಪ್ಪು ಬಣ್ಣದಲ್ಲಿ ಬರೆದಿದ್ದಾರೆ. ಬಸ್ ಮೇಲೆ […]

ಗಡಿ ವಿವಾದ ಮಾತುಕತೆ ಸಿದ್ದ ಎಂದು ಮತ್ತೊಂದು ಕ್ಯಾತೆ ತೆಗೆದ ಮಹಾ ಸಿಎಂ

ಮುಂಬೈ,ನ.24-ಗಡಿ ವಿವಾದವನ್ನೇ ಮುಂದಿಟ್ಟುಕೊಂಡು ಸದಾ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಮಹಾರಾಷ್ಟ್ರ ಇದೀಗ ಬೆಳಗಾವಿ ಗಡಿ ವಿಷಯದಲ್ಲಿ ಮತ್ತೊಂದು ಕ್ಯಾತೆ ತೆಗೆದಿದೆ. ಹಲವು ದಶಕಗಳಿಂದ ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಕಗ್ಗಂಟಾಗಿಯೇ ಪರಿಣಮಿಸಿರುವ ಗಡಿ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ನಾವು ಬದ್ದ ಎಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ. ಕರ್ನಾಟಕ ಸರ್ಕಾರ ಬಯಸಿದರೆ ಗಡಿ ವಿವಾದವನ್ನು ಮಾತುಕತೆಯಿಂದಲೇ ಸೌಹಾರ್ದಯುತವಾಗಿ ಪರಿಹರಿಸಿಕೊಳ್ಳಲಾಗುವುದು. ಇದಕ್ಕೆ ಅಲ್ಲಿನ ಸರ್ಕಾರ ಯಾವ ನಿರ್ಧಾರಕ್ಕೆ ಬರುತ್ತದೆ ಎಂಬುದರ ಮೇಲೆ ಅವಲಂಬಿಸಿದೆ ಎಂದಿದ್ದಾರೆ. ವಿಶೇಷವೆಂದರೆ […]