ಜಿಲ್ಲಾಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ತೀವ್ರ ತರಾಟೆ

ಬೆಂಗಳೂರು,ಅ.17- ರಾಜ್ಯದಲ್ಲಿ ಉಂಟಾದ ಅತಿವೃಷ್ಟಿ, ಪ್ರವಾಹದಿಂದ ಹಾನಿಗೀಡಾಗಿರುವ ಮನೆ ಹಾಗೂ ಬೆಳೆ ಪರಿಹಾರ ವಿತರಣೆ ತೃಪ್ತಿಕರವಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲಾಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿಂದು ನಡೆದ ಜಿಲ್ಲಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಿರೀಕ್ಷಿತ ಪ್ರಮಾಣದಲ್ಲಿ ಪರಿಹಾರ ಕಾರ್ಯವನ್ನು ಕೈಗೊಂಡಿಲ್ಲ. ಇದರಿಂದ ಸರ್ಕಾರದ ವರ್ಚಸ್ಸಿಗೆ ಧಕ್ಕೆಯಾಗುತ್ತದೆ. ಜಿಲ್ಲಾಧಿಕಾರಿಗಳು ತಾಲ್ಲೂಕು ಕಚೇರಿಗೆ ಭೇಟಿ ನೀಡಿ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಪ್ರಯೋಜನಗಳು ದೊರೆಯುವಂತೆ ಮಾಡಬೇಕು. ಆದರೆ ಜಿಲ್ಲಾಧಿಕಾರಿಗಳು ಕಚೇರಿ ಬಿಟ್ಟು ಕದಲುತ್ತಿಲ್ಲ […]

ವ್ಯಾಪಕ ಮಳೆ : ತುರ್ತು ಕ್ರಮ ಕೈಗೊಳ್ಳುವಂತೆ ಡಿಸಿಗಳಿಗೆ ಸಿಎಂ ಸೂಚನೆ

ಬೆಂಗಳೂರು,ಆ.28-ರಾಜ್ಯದ ವಿವಿಧೆಡೆ ಪುನಃ ವ್ಯಾಪಕ ಮಳೆಯಾಗುತ್ತಿದ್ದು, ಅಗತ್ಯವಿರುವ ಕಡೆ ಜಿಲ್ಲಾಧಿಕಾರಿಗಳಿಗೆ ತುರ್ತು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದವರು,ಇಂದು ಸಂಜೆ ಮಳೆಯಿಂದಾಗಿ ಹೆಚ್ಚು ಹಾನಿಗೊಳಗಾಗಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನರೆನ್ಸ್ ಮೂಲಕ ಸಭೆ ನಡೆಸಲಾಗುವುದು ಎಂದರು. ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ದೂರವಾಣಿ ಮುಖೇನ ಮಳೆ ಹಾನಿ ಕುರಿತಂತೆ ಪ್ರಾಥಮಿಕ ವರದಿಯನ್ನು ಪಡೆದಿದ್ದೇನೆ. ಜನ-ಜಾನುವಾರುಗಳ ರಕ್ಷಣೆಗೆ ಮೊದಲ ಅದ್ಯತೆ ನೀಡಬೇಕು, ಹಾನಿಗಳ ಕುರಿತಂತೆ ಕೂಡಲೇ ವರದಿ ನೀಡಬೇಕೆಂದು […]