ದೇವಸ್ಥಾನಗಳ ಸಮಗ್ರ ಅಭಿವೃದ್ದಿಗೆ “ದೈವ ಸಂಕಲ್ಪ” ಯೋಜನೆ: ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು ಫೆಬ್ರವರಿ 04: ಪ್ರಧಾನಿ ನರೇಂದ್ರ ಮೋದಿ ಅವರ ದೇವಸ್ಥಾನಗಳ ಸಮಗ್ರ ಅಭಿವೃದ್ದಿಯ ಕನಸನ್ನ ರಾಜ್ಯದಲ್ಲೂ ನನಸು ಮಾಡುವ ನಿಟ್ಟಿನಲ್ಲಿ ನೂತನ ಯೋಜನೆ “ದೈವ ಸಂಕಲ್ಪ” ವನ್ನು ಮುಜರಾಯಿ ಇಲಾಖೆಯ ವತಿಯಿಂದ ಪ್ರಾರಂಭಿಸಲಾಗುವುದು ಎಂದು ಮಾನ್ಯ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ  ಶಶಿಕಲಾ ಜೊಲ್ಲೆ ಅವರು ಪ್ರಕಟಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿಯವರು ಕಾಶಿಯನ್ನು ಅಭಿವೃದ್ದಿಗೊಳಿಸಿದಂತೆ ರಾಜ್ಯದಲ್ಲಿ ಅತಿ ಹೆಚ್ಚು ಭಕ್ತರು ಭೇಟಿ ನೀಡುವ 25 ದೇವಸ್ಥಾನಗಳ ಸಮಗ್ರ ಅಭಿವೃದ್ದಿಗೆ ಮಾಸ್ಟರ್‌ […]