ಮೇಕೆದಾಟು ಪಾದಯಾತ್ರೆ ಯಶಸ್ಸಿಗೆ ಕಾಂಗ್ರೆಸ್ ಪಣ..

ಬೆಂಗಳೂರು, ಜ.4- ಹಲವು ಅಡ್ಡಿ ಆತಂಕಗಳ ನಡುವೆಯೂ ಮೇಕೆದಾಟು ಯೋಜನೆಗಾಗಿ ನಡೆಯುತ್ತಿರುವ ಪಾದಯಾತ್ರೆ ಯಶಸ್ವಿಗೊಳಿಸಲು ಕಾಂಗ್ರೆಸ್ ಪಣತೊಟ್ಟಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಇಡೀ ದಿನ ಪಾದಯಾತ್ರೆಯ ಕುರಿತಂತೆ ರಚಿಸಲಾಗಿರುವ ಹಲವು ಸಮಿತಿಗಳ ಜತೆ ಸಮಾಲೋಚನೆ ನಡೆಸಿದರು. ಪ್ರಚಾರ ಸಮಿತಿ, ಆಹಾರ ಸಮಿತಿ, ಸಾರಿಗೆ ಸಮಿತಿ, ಮಾಧ್ಯಮ ಸಮಿತಿ, ಧಾರ್ಮಿಕ ಹಾಗೂ ಇತರ ಸಮುದಾಯಗಳ ಸಮಿತಿಯ ಜತೆಗೆ ಸಭೆಗಳನ್ನು ನಡೆಸಿ ಚರ್ಚಿಸಿದರು. ಸಂಜೆ ಕೆಪಿಸಿಸಿ ಕಚೇರಿಯಲ್ಲಿ ಹಿರಿಯ ನಾಯಕರನ್ನು ಒಳಗೊಂಡ ರಾಜ್ಯ ಮಟ್ಟದ ನಿಗಾವಣೆ ಸಮಿತಿ ಸಭೆ […]