‘ರಾಜಕೀಯ’ ಮಾಡ್ತಾರಾ ಕಿಚ್ಚ ಸುದೀಪ್..?

ಬೆಂಗಳೂರು,ಫೆ.3-ಕಿಚ್ಚ ಸುದೀಪ್ ಕಾಂಗ್ರೆಸ್ ಸೇರುವ ಬಗ್ಗೆ ವದಂತಿಗಳು ತೀವ್ರಗೊಂಡಿದ್ದು, ಬಹುತೇಕ ನಾಯಕರು ಸ್ವಾಗತಿಸಿದ್ದಾರೆ. ಸುದೀಪ್ ಅವರು ಕಾಂಗ್ರೆಸ್ ಪರವಾದ ಒಲವು ಹೊಂದಿದ್ದಾರೆ. ಅವರೊಂದಿಗೆ ಈಗಾಗಲೇ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಚರ್ಚೆ ನಡೆಸಿ ಆಹ್ವಾನ ನೀಡಿದ್ದಾರೆ. ಇದರ ಬೆನ್ನಲ್ಲೇ ಸುದೀಪ್ ಮತ್ತು ಡಿ.ಕೆ.ಶಿವಕುಮಾರ್ ಅವರು ರಹಸ್ಯ ಭೇಟಿಯಾಗಿ ಚರ್ಚೆ ನಡೆಸಿರುವುದು ಕುತೂಹಲ ಕೆರಳಿಸಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸುದೀಪ್ ಚಿತ್ರದುರ್ಗ ಅಥವಾ ಶಿವಮೊಗ್ಗ ಕ್ಷೇತ್ರದಿಂದ ಕಣಕ್ಕಿಳಿಸುವ ಸಾಧ್ಯತೆ ಕೇಳಿ ಬಂದಿದೆ. ಈ ನಿಟ್ಟಿನಲ್ಲಿ ಸುದೀಪ್ ಅವರನ್ನು […]