ಆ.2ಕ್ಕೆ ಪ್ರಕಟವಾಗಲಿದೆ ಡಿಕೆಶಿ ಜಾಮೀನು ಅರ್ಜಿಯ ತೀರ್ಪು

ನವದೆಹಲಿ,ಜು.30- ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಜಾಮೀನು ಅರ್ಜಿ ಕುರಿತ ತೀರ್ಪನ್ನು ಜಾರಿ ನಿರ್ದೇಶನಾಲಯದ ವಿಶೇಷ ನ್ಯಾಯಾಲಯ ಆ.2ರಂದು ಪ್ರಕಟಿಸುವುದಾಗಿ ತಿಳಿಸಿದೆ. ಈ ಮೊದಲು 2017ರಲ್ಲಿ ನಡೆದಿದ್ದ ಆದಾಯ ತೆರಿಗೆ ಇಲಾಖೆ ದಾಳಿ ಆಧರಿಸಿ ಲಭ್ಯವಾದ ಮಾಹಿತಿಗಳ ಅನುಸಾರ ಇಡಿ ಪ್ರಕರಣ ದಾಖಲಿಸಿತ್ತು. ಐದು ದಿನಗಳ ಕಾಲ ದೆಹಲಿಯ ಜಾರಿ ನಿರ್ದೇಶನಾಲಯದ ಕಚೇರಿಯಲ್ಲಿ ವಿಚಾರಣೆ ನಡೆಸಲಾಗಿತ್ತು. 2019ರ ಸೆಪ್ಟೆಂಬರ್ 3ರಂದು ಡಿ.ಕೆ.ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದರು. ಸುಮಾರು 58 […]