ಬೆಂಗಳೂರು-ಮೈಸೂರು ರಸ್ತೆ ನಿರ್ಮಿಸಿದವರಿಗೆ ಪದ್ಮಭೂಷಣ ಕೊಡಿಸಬೇಕು..!
ಬೆಂಗಳೂರು, ಆ.30- ಮೈಸೂರು ಹೆದ್ದಾರಿ ಪ್ಲಾನ್ ಮಾಡಿರುವ ಇಂಜಿನಿಯರ್ಗಳಿಗೆ ಮುಖ್ಯಮಂತ್ರಿಗಳು ಪದ್ಮಭೂಷಣ ಅಥವಾ ಬೇರೆ ಪ್ರಶಸ್ತಿ ಕೊಡಿಸಬೇಕು. ರಾಷ್ಟ್ರೀಯ ಹೆದ್ದಾರಿ ಮಾಡುವಾಗ ಎತ್ತರ ಪ್ರದೇಶದಲ್ಲಿ ನೀರು ಯಾವ ರೀತಿ ಹೋಗಬೇಕು ಎಂಬುದರ ಬಗ್ಗೆ ಸಾಮಾನ್ಯ ಪ್ರಜ್ಞೆ ಇಟ್ಟುಕೊಂಡು ಯೋಜನೆ ರೂಪಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ರಸ್ತೆಯ ಟೋಲ್ ಜಾಗ ಈಗ ಕೆರೆಯಾಗಿದೆ. ಮುಖ್ಯಮಂತ್ರಿಗಳು ಕೂಡಲೇ ಈ ವಿಚಾರದಲ್ಲಿ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ರಸ್ತೆ ನಿರ್ಮಾಣ ಎಂದರೆ ಜಲ್ಲಿ, […]