ಬಿಟ್ಟಿ ಪ್ರಚಾರಕ್ಕೆ ಪಾದಯಾತ್ರೆ: ನಂದಿನಿಗೌಡ ಆರೋಪ

ಬೆಂಗಳೂರು,ಜ.4- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ಮೇಕೆದಾಟು ಅಣೆಕಟ್ಟು ಯೋಜನೆಗೆ ಡಿಪಿಆರ್ ತಯಾರಿಸಿ, ಕೇಂದ್ರ ಸರ್ಕಾರದ ಅನುಮೋದನೆಗೆ ಕಳುಹಿಸಿದ್ದಾರೆ. ಅನುಮೋದನೆ ಸಿಕ್ಕ ಕೂಡಲೇ ಯೋಜನೆ ಅನುಷ್ಠಾನಗೊಳ್ಳಲಿದೆ. ಈ ಲಾಭ ಬಿಜೆಪಿಗೆ ಆಗಲಿದೆ ಎಂಬ ದುರುದ್ದೇಶದಿಂದ ಡಿ.ಕೆ ಶಿ.ವಕುಮಾರ್ ಬಿಟ್ಟಿ ಪ್ರಚಾರಕ್ಕಾಗಿ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ರಾಮನಗರ ಜಿಲ್ಲಾ ಭಾರತೀಯ ಜನತಾ ಪಕ್ಷ ಉಪಾಧ್ಯಕ್ಷರಾದ ನಂದಿನಿ ಗೌಡ ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು , ಡಾ.ನಂಜುಂಡಪ್ಪ ಅವರ ವರದಿಯಂತೆ, ಕನಕಪುರ ತಾಲ್ಲೂಕು ವಿವಿಧ ಕ್ಷೇತ್ರಗಳಲ್ಲಿ ಹಿಂದುಳಿದಿದೆ. […]

ಜೈಲಿಗೆ ಕಳುಹಿಸಿದರೂ ಮೇಕೆದಾಟು ಪಾದಯಾತ್ರೆ ನಿಲ್ಲಲ್ಲ: ಡಿ ಕೆ ಶಿವಕುಮಾರ್

ಬೆಂಗಳೂರು,ಜ.4- ಕೊರೊನಾ ಪ್ರಕರಣಗಳ ಬಗ್ಗೆ ಅನಗತ್ಯ ವೈಭವೀಕರಣ ನಡೆಯುತ್ತಿದೆ. ಯಾರು ಎಷ್ಟೇ ಎದುರಿಸಿದರೂ ನಮ್ಮ ಪಾದಯಾತ್ರೆ ನಿಲ್ಲುವುದಿಲ್ಲ. ಜೈಲಿಗೆ ಹಾಕಿದರೂ ನಾವು ಹಿಂದೆ ಸರಿಯುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಿರುವುದರಿಂದ ಸಭೆ ಸಮಾರಂಭಗಳಿಗೆ ನಿರ್ಬಂಧ ವಿಸಲಾಗುವುದು. ಕಾಂಗ್ರೆಸಿಗರು ಪಾದಯಾತ್ರೆ ಕೈಬಿಡಬೇಕು ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮಾಡಿರುವ ಮನವಿಗೆ ಪ್ರತಿಕ್ರಿಯಿಸಿದ ಅವರು, ಕೊರೊನಾ ಹೆಸರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕಿರುಕುಳ ನೀಡಲಾಗುತ್ತಿದೆ. ಪ್ರತಿಯೊಬ್ಬರಿಂದ 3ರಿಂದ 4 ಸಾವಿರ […]

ಹರದನಹಳ್ಳಿ ಜನ್ಮಸ್ಥಳ, ಬಿಡದಿ ಕರ್ಮಸ್ಥಳ. ಇದೇ ನನ್ನ ಪಾಲಿನ ಧರ್ಮಸ್ಥಳ: ಎಚ್‍ಡಿಕೆ ಟ್ವೀಟ್

ಬೆಂಗಳೂರು, ಜ.4- ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಸಹೋದರರ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹರದನಹಳ್ಳಿ ನನ್ನ ಜನ್ಮಸ್ಥಳ. ಬಿಡದಿ ನನ್ನ ಕರ್ಮಸ್ಥಳ. ಇದೇ ನನ್ನ ಪಾಲಿನ ಧರ್ಮಸ್ಥಳ ಎಂದಿದ್ದಾರೆ. ಹೌದು, ಹರದನಹಳ್ಳಿ ನನ್ನ ಜನ್ಮಸ್ಥಳ. ಬಿಡದಿ ನನ್ನ ಕರ್ಮಸ್ಥಳ. ಇದುವೇ ನನ್ನ ಪಾಲಿನ ಧರ್ಮಸ್ಥಳ. ಈ ಮಣ್ಣಲ್ಲಿಯೇ ನಾನು ಮಣ್ಣಾಗುವೆ ಎಂದು ಈಗಾಗಲೇ ಹೇಳಿದ್ದೇನೆ. ಇದರ ಹೊರತಾಗಿ ರಾಮನಗರಕ್ಕೆ ರಿಯಲ್ ಎಸ್ಟೇಟ್ ಮಾಡಲಿಕ್ಕೆ ನಾನು ಬಂದವನಲ್ಲ. 4/5 — H D […]