ಮೀಸಲಾತಿ ವಿಷಯದಲ್ಲಿ ಮುಖ್ಯಮಂತ್ರಿ ಟೋಪಿ ಹಾಕಿದ್ದಾರೆ : ಡಿಕೆಶಿ

ಬೆಂಗಳೂರು,ಡಿ.31- ಪಂಚಮಸಾಲಿ, ಒಕ್ಕಲಿಗರ ಮೀಸಲಾತಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿನ್ನೆ ಹೊರಡಿಸಿರುವ ಘೋಷಣೆಯಿಂದ ಯಾವ ಸಮಾಜಕ್ಕೂ ನ್ಯಾಯ ಸಿಗುವುದಿಲ್ಲ. ಮುಖ್ಯಮಂತ್ರಿ ಟೋಪಿ ಹಾಕಿ, ಜನ ಸಮುದಾಯಕ್ಕೆ ಮೋಸ ಮಾಡಿದ್ದಾರೆ. ಯಾರಿಗೂ ಅವಕಾಶ ಸಿಗದಿರಲಿ ಎಂದು ರಾಜಕೀಯವಾಗಿ ಹೆದರಿಕೊಂಡು ತೆಗೆದುಕೊಂಡಿರುವ ತೀರ್ಮಾನಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಬಳಿ ಎಲ್ಲಾ ಮಾಹಿತಿ ಮತ್ತು ದಾಖಲೆಗಳಿವೆ. ಶೀಘ್ರವೇ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಸೇರಿ ಪತ್ರಿಕಾಗೋಷ್ಠಿ ನಡೆಸಿ ಎಲ್ಲ ವಿವರಗಳನ್ನು ಬಿಚ್ಚಿಡುತ್ತೇವೆ […]
ವಾರಕ್ಕೊಂದು ಸಭೆ ನಡೆಸಿ ಅಭ್ಯರ್ಥಿಗಳ ಆಯ್ಕೆ : ಡಿಕೆಶಿ

ಬೆಂಗಳೂರು,ಡಿ.15- ವಾರಕ್ಕೊಂದು ಸಭೆ ನಡೆಸಿ ಕ್ಷೇತ್ರವಾರು ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿಂದು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಕಾಂಕ್ಷಿಗಳ ಅರ್ಜಿಗಳು ತುಂಬಾ ಇವೆ,ಯಾರ ಹೆಸರನ್ನು ಸದ್ಯಕ್ಕೆ ಬಹಿರಂಗ ಮಾಡುವುದಿಲ್ಲ. ಪ್ರತಿವಾರ ಸಭೆ ನಡೆಸಲಾಗುವುದು. ಹಂತ ಹಂತವಾಗಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ ಎಂದರು. ಬಿಜೆಪಿಗೆ ಕೇಂದ್ರ ಮತ್ತು ರಾಜ್ಯದಲ್ಲಿ ಭವಿಷ್ಯ ಇಲ್ಲ ಎಂದು ಬಹಳಷ್ಟು ಜನ ಕಾಂಗ್ರೆಸ್ ಸೇರುತ್ತಿದ್ದಾರೆ. ಈಗಾಗಲೇ ಹಿರೇಕೆರೂರಿನ ಮಾಜಿ ಶಾಸಕ ಯು.ಬಿ.ಬಣಕಾರ್ ಕಾಂಗ್ರೆಸ್ ಸೇರಿದ್ದಾರೆ. […]
136 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ : ಭವಿಷ್ಯ ನುಡಿದ ಡಿಕೆಶಿ

ಬೆಂಗಳೂರು,ಡಿ.15- ಪಕ್ಷದ ವತಿಯಿಂದ ನಡೆಸಿರುವ ಸಮೀಕ್ಷೆಯಲ್ಲಿ ಕಾಂಗ್ರೆಸ್ ಪಕ್ಷ 136 ಸ್ಥಾನಗಳನ್ನು ಗೆಲ್ಲಲಿದೆ. ಹೀಗಾಗಿ ಆಪರೇಷನ್ ಕಮಲಕ್ಕೆ ಅವಕಾಶ ಇಲ್ಲ. ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಪ್ರೆಸ್‍ಕ್ಲಬ್‍ನಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ನಮ್ಮ ಸಮೀಕ್ಷೆಯಲ್ಲಿ ಬಿಜೆಪಿ 67ರಲ್ಲಿ ಮಾತ್ರ ಗೆಲ್ಲಲಿದೆ ಎಂದಿದೆ. ಜೆಡಿಎಸ್ ಬಗ್ಗೆ ಮತ್ತೊಂದು ದಿನ ಮಾತನಾಡುತ್ತೇನೆ ಎಂದರು. ಕಾಂಗ್ರೆಸ್ 100 ಕ್ಷೇತ್ರಗಳಲ್ಲಿ ಒಬ್ಬ ವ್ಯಕ್ತಿಯ ಹೆಸರನ್ನು ಶಿಫಾರಸ್ಸು ಮಾಡಲಿದೆ. ಟಿಕೆಟ್‍ಗಾಗಿ ಕಾಂಗ್ರೆಸ್‍ಗೆ 1350 […]
ನನಗೆ ಹುಟ್ಟಹಬ್ಬ ಬೇಡ, ಪಕ್ಷದ ಉತ್ಸವಗಳು ನಡೆಯಬೇಕು: ಡಿಕೆಶಿ
ಬೆಂಗಳೂರು,ಜು.13- ನನಗೆ ಯಾವುದೇ ಹುಟ್ಟುಹಬ್ಬದ ಉತ್ಸವಗಳು ಬೇಡ. ಪಕ್ಷದ ಉತ್ಸವಗಳು ನಡೆಯಬೇಕಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಅಭಿಮಾನಿಗಳು ಶಿವಕುಮಾರೋತ್ಸವ ನಡೆಯಬೇಕು ಎಂದು ಹೇಳಿದ್ದಾರೆ. ಅದು ಅವರ ವೈಯಕ್ತಿಕ ಅಭಿಪ್ರಾಯ. ನನಗೆ ಬೇರೆ ಯಾವ ಉತ್ಸವಗಳು ಬೇಕಿಲ್ಲ. ಈ ಮೊದಲು ನನ್ನ ಹುಟ್ಟಹಬ್ಬವನ್ನು ನಾನು ಸರಳವಾಗಿ ಕೇದಾರನಾಥ ಕ್ಷೇತ್ರದಲ್ಲಿ ಆಚರಿಸಿಕೊಂಡಿದ್ದಾರೆ. ಸಿದ್ದರಾಮೋತ್ಸವ ವಿಷಯದಲ್ಲಿ ನಮಗೆ ಯಾವ ಆಕ್ಷೇಪಗಳು ಇಲ್ಲ. ನನ್ನ ಅತಿಥಿಯಾಗಿ ಕರೆದಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ. ಮಾಧ್ಯಮಗಳು ಅನಗತ್ಯವಾಗಿ […]