ಕಾಂಗ್ರೆಸ್ ಪಾದಯಾತ್ರೆಯಿಂದ ಟ್ರಾಫಿಕ್ ಕಿರಿಕಿರಿ, ಹೈಕೋರ್ಟ್ ಅಸಮಾಧಾನ

ಬೆಂಗಳೂರು, ಮಾ.3- ಕಾಂಗ್ರೆಸ್‍ನ ಪಾದಯಾತ್ರೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್ ನಗರದಲ್ಲಿ ಇನ್ನು ಮುಂದೆ ಯಾವುದೇ ಪ್ರತಿಭಟನೆಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ಸರ್ಕಾರಕ್ಕೆ ತಾಕೀತು ಮಾಡಿದೆ. ಮೇಕೆದಾಟು ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕೈಗೊಂಡಿರುವ ಪಾದಯಾತ್ರೆಯಿಂದ ಟ್ರಾಫಿಕ್ ಜಾಮ್ ಉಂಟಾಗಿ ಸಾರ್ವಜನಿಕರು ಅನುಭವಿಸಿದ ತೊಂದರೆ, ಸ್ವತಃ ನ್ಯಾಯಾಧೀಶರೇ ಟ್ರಾಫಿಕ್‍ಜಾಮ್‍ನಲ್ಲಿ ಸಿಲುಕಿ ನ್ಯಾಯಾಲಯಕ್ಕೆ ತಡವಾಗಿ ಬರಬೇಕಾದ ಪರಿಸ್ಥಿತಿ ಉಂಟಾಯಿತು. ಇದರಿಂದ ತೀವ್ರ ಅಸಮಾಧಾನಗೊಂಡ ನ್ಯಾಯಾಲಯ ಇನ್ನು ಮುಂದೆ ನಗರದಲ್ಲಿ ಯಾವುದೇ ಪ್ರತಿಭಟನೆಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ಸರ್ಕಾರಕ್ಕೆ ಆದೇಶ ನೀಡಿದೆ. […]