ಹಿಜಾಬ್ ವಿವಾದ : ಹೈಕೋರ್ಟ್ ಮೌಕಿಕ ಆದೇಶಕ್ಕೆ ತಡೆಯಾಜ್ಞೆ ನೀಡಲು ಸುಪ್ರೀಂ ನಕಾರ
ನವದೆಹಲಿ, ಫೆ.11- ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಧಾರ್ಮಿಕತೆಯನ್ನು ಬಿಂಬಿಸುವ ಯಾವುದೇ ಉಡುಪುಗಳನ್ನು ಧರಿಸದಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ಮಧ್ಯಂತರ ಮೌಕಿಕ ಆದೇಶಕ್ಕೆ ತಡೆಯಾಜ್ಞೆ ನೀಡಲು ಹಾಗೂ ಪ್ರಕರಣದ ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ನಿನ್ನೆ ಹೈಕೋರ್ಟ್‍ನಲ್ಲಿ ನೀಡಲಾಗಿದ್ದ ಆದೇಶವನ್ನು ಸುಪ್ರೀಂಕೋರ್ಟ್‍ನಲ್ಲಿ ಪ್ರಶ್ನಿಸಲಾಗಿತ್ತು. ಅರ್ಜಿದಾರರ ಮನವಿಯಂತೆ ಪ್ರಕರಣದ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನ ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ ಅವರನ್ನು ಒಳಗೊಂಡ ವಿಭಾಗೀಯ ಪೀಠ ನಿರಾಕರಿಸಿದೆ. ರಾಜ್ಯದಲ್ಲಿ ಏನಾಗುತ್ತಿದೆ ಮತ್ತು ಹಿಜಾಬ್ ಪ್ರಕರಣದ ವಿಚಾರಣೆಯನ್ನು ನಾವು ಗಮನಿಸುತ್ತಿದ್ದೇವೆ. ಈ ಪ್ರಕರಣವನ್ನು […]