ಕೋವಿಡ್ ಹೆಚ್ಚಳ : 18 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್
ಬೆಂಗಳೂರು,ಆ.11- ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.7.2ರಷ್ಟಿದ್ದು, 18 ವರ್ಷ ಮೇಲ್ಪಟ್ಟವರು 3ನೇ ಡೋಸ್‍ನ್ನು ಮುನ್ನೆಚ್ಚರಿಕೆ ಕ್ರಮವಾಗಿ ಪಡೆಯ ಬೇಕೆಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು. ವಿಧಾನಸೌಧದಲ್ಲಿಂದು ನಡೆದ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೇ.17ರಷ್ಟು ಮಾತ್ರ 3ನೇ ಡೋಸ್ ಲಸಿಕೆ ಪಡೆದಿದ್ದಾರೆ. ಕೋವಿಡ್ ಹೋಗಿದೆ ಎಂದು ಉದಾಸೀನ ಮಾಡದೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದರು. ಹೈದರಾಬಾದ್ ಮೂಲದ ಸಂಸ್ಥೆಹೊಸದಾಗಿ ಕಾರ್ಬೋ ವ್ಯಾಕ್ಸ್‍ನ್ನು ಸಂಶೋಧಿಸಿದೆ. […]
ಬೂಸ್ಟರ್ ಡೋಸ್ ಅಭಿಯಾನ,ಕೊರೊನಾ ಮುಕ್ತ ಕರ್ನಾಟಕಕ್ಕೆ ಸುಧಾಕರ್ ಮನವಿ
ಬೆಂಗಳೂರು, ಜು.15- ದೇಶದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರ್ಕಾರ ಉಚಿತವಾಗಿ ಅರ್ಹರಿಗೆ ಕೋವಿಡ್ ಬೂಸ್ಟರ್ ಮುನ್ನೆಚ್ಚರಿಕೆ ಲಸಿಕೆಯನ್ನುಪರಿಣಾಮಕಾರಿಯಾಗಿ ರಾಜ್ಯದಲ್ಲೂ ಅನುಷ್ಠಾನಗೊಳಿಸಲು ಜಿಲ್ಲಾ ಮಟ್ಟದ ಸೂಕ್ಷ್ಮಕ್ರಿಯಾ ಯೋಜನೆಯನ್ನು ಸರ್ಕಾರ ರೂಪಿಸಿದೆ. ರಾಜ್ಯದಲ್ಲಿ ಅರ್ಹರಿಗೆ ಉಚಿತವಾಗಿ ಬೂಸ್ಟರ್ ಡೋಸ್‍ಗಳನ್ನು ನೀಡುವ ಕುರಿತಾಗಿ ಮನೆ ಮನೆಗೆ ಲಸಿಕಾ ಮಿತ್ರ, ಬುಧವಾರದ ಲಸಿಕಾ ಮೇಳದ ಜೊತೆಗೆ ಐಟಿ ಕಂಪನಿ, ಕಾರ್ಖಾನೆ, ಸರ್ಕಾರಿ ಕಛೇರಿಗಳಲ್ಲಿ ಸ್ಥಳದಲ್ಲೇ ಲಸಿಕೆ ನೀಡುವ ಜಿಲ್ಲಾಮಟ್ಟದ ಸೂಕ್ಷ್ಮ ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ಸರ್ಕಾರ ಹೇಳಿದೆ. […]