ಜೋಡಿ ಕೊಲೆ ಆರೋಪಿಗಳಿಗೆ ಗುಂಡೇಟು

ದೊಡ್ಡಬಳ್ಳಾಪುರ, ಫೆ.19- ಕ್ರಿಕೆಟ್ ಪಂದ್ಯಾವಳಿ ವೇಳೆ ನಡೆದಿದ್ದ ಗಲಾಟೆ ಸಂದರ್ಭದಲ್ಲಿ ಇಬ್ಬರು ಯುವಕರನ್ನು ಕೊಲೆ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳು ಪೊಲೀಸರ ಗುಂಡೇಟಿನಿಂದ ಗಾಯಗೊಂಡು ಸಿಕ್ಕಿಬಿದ್ದಿದ್ದಾರೆ. ವಿನಯ್ ಮತ್ತು ತ್ರಿಮೂರ್ತಿ (ಅಪ್ಪಾಜಿ) ಬಂತ ಆರೋಪಿ ಗಳಾಗಿದ್ದು, ಇವರಿಬ್ಬ ರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಫೆ.17ರಂದು ಮಧ್ಯಾಹ್ನ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕ್ರಿಕೆಟ್ ಪಂದ್ಯಾವಳಿ ವೇಳೆ ಕ್ಷುಲ್ಲಕ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಆ ಸಂದರ್ಭದಲ್ಲಿ ಒಂದು ಗುಂಪಿನಲ್ಲಿದ್ದವರು ಚಾಕುವಿನಿಂದ ಭರತ್ ಮತ್ತು ಪ್ರತೀಕ್ […]

ವರ್ಷಾಂತ್ಯಕ್ಕೆ ಮೈಸೂರು-ತುಮಕೂರು ಡಬ್ಬಲ್ ಡೆಕ್ಕರ್ ಬಸ್ ಸೇವೆ

ಬೆಂಗಳೂರು,ಜ.31- ಮೈಸೂರು ಮತ್ತು ತುಮಕೂರಿನ ನಾಗರಿಕರು ಈ ವರ್ಷದ ಅಂತ್ಯದ ವೇಳೆಗೆ ಡಬಲ್ ಡೆಕ್ಕರ್ ಬಸ್‍ಗಳಲ್ಲಿ ಪ್ರಯಾಣಿಸುವ ಸಾಧ್ಯತೆ ಇದೆ. ಇದೇ ಮೊದಲ ಬಾರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪ್ರಾಯೋಗಿಕ ಕಾರ್ಯಕ್ರಮದಡಿ ಮೈಸೂರು ಮತ್ತು ತುಮಕೂರಿನಲ್ಲಿ ನಗರದೊಳಗಿನ ಪ್ರಯಾಣಕ್ಕಾಗಿ ಡಬಲ್ ಡೆಕ್ಕರ್, ಹವಾನಿಯಂತ್ರಿತ ಎಲೆಕ್ಟ್ರಿಕ್ ಬಸ್‍ಗಳನ್ನು ಪರಿಚಯಿಸಲು ಯೋಜಿಸುತ್ತಿದೆ. ಈಗಾಗಲೇ ಮೈಸೂರಿನಲ್ಲಿ ಅಂಬಾರಿ ಎಂಬ ಡಬಲ್ ಡೆಕ್ಕರ್ ಬಸ್ ಪ್ರವಾಸೋದ್ಯಮ ಉತ್ತೇಜನಕ್ಕಾಗಿ ಸೇವೆಯಲ್ಲಿದೆ. ವಿದ್ಯಾರ್ಥಿಗಳು ಮತ್ತು ಪ್ರವಾಸಿಗರಿಗೆ ಸೇವೆ ಒದಗಿಸುವ ಉದ್ದೇಶದಿಂದ ಪ್ರತಿ ನಗರಕ್ಕೆ […]

ಡಬಲ್ ಡೆಕ್ಕರ್ ಬಸ್‍ಗೆ ಕಂಟೈನರ್ ಡಿಕ್ಕಿ, ನಾಲ್ವರು ಸಾವು

ಲಕ್ನೋ,ಅ.23- ಉತ್ತರಪ್ರದೇಶದ ಎಕ್ಸ್‍ಪ್ರೆಸ್ ವೇ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವು, 42 ಮಂದಿ ಗಾಯಗೊಂಡಿದ್ದಾರೆ. ಇಂದು ಮುಂಜಾನೆ ಇಟಾವಾ ಬಳಿ ಲಕ್ನೋ-ಆಗ್ರಾ ಎಕ್ಸ್‍ಪ್ರೆಸ್‍ವೇಯಲ್ಲಿ ಕಂಟೈನರ್ ಮತ್ತು ಡಬಲ್ ಡೆಕ್ಕರ್ ಬಸ್ ನಡುವಿನ ಮುಖಾಮುಖಿಯಿಂದ ಈ ದುರಂತ ಸಂಭವಿಸಿದೆ. ಡಿಕ್ಕಿ ಸಂಭವಿಸಿ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 42 ಮಂದಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟರೆ, ತೀವ್ರವಾಗಿ ಗಾಯಗೊಂಡಿರುವ 42ಕ್ಕೂ ಹೆಚ್ಚು ಪ್ರಯಾಣಿಕರನ್ನು ಸಫಾಯಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. ವಿಧಾನಸಭೆ ಡೆಪ್ಯುಟಿ ಸ್ಪೀಕರ್ […]