ಕಾಂಗ್ರೆಸ್ಸಿಗರೇ ಮೇಕೆದಾಟು ಯೋಜನೆಗೆ ಡಿಪಿಆರ್ ತಯಾರಿಸಿದ್ದು ಯಾರು?: ಬಿಜೆಪಿ ಪ್ರಶ್ನೆ..

ಬೆಂಗಳೂರು,ಜ.2- ಮೇಕೆದಾಟು ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕಾಗಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆಗೆ ಬಿಜೆಪಿ ಹಲವು ಮೂಲಭೂತ ಪ್ರಶ್ನೆಗಳನ್ನು ಎತ್ತಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಮೇಕೆದಾಟು ಪಾದಯಾತ್ರೆ ಹೆಸರಿನಲ್ಲಿ ಸುಳ್ಳಿನ ಮೆರವಣಿಗೆ ನಡೆಸುತ್ತಿರುವ ಕಾಂಗ್ರೆಸ್ಸಿಗರೇ, ಮೇಕೆದಾಟು ಯೋಜನೆಗೆ ಡಿಪಿಆರ್ ತಯಾರಿಸಿದ್ದು ಯಾರು? ಎಂದು ಪ್ರಶ್ನಿಸಿದೆ. ಮಾನ್ಯ ಸಿದ್ದರಾಮಯ್ಯ ಅವರೇ, ಮೇಕೆದಾಟು ಯೋಜನೆಗೆ ಡಿಪಿಆರ್ ತಯಾರಿ ಮಾಡಿದ್ದು ನನ್ನ ಸರ್ಕಾರ ಎಂದು ಹೇಳಿದ್ದೀರಿ. ಡಿಪಿಆರ್ ತಯಾರಾಗಿದ್ದು ನಮ್ಮ ಕಾಲದಲ್ಲಿ ಆಗಿದ್ದು ಎಂಬುದು ಕುಮಾರಸ್ವಾಮಿ ಅವರು ಹೇಳುತ್ತಿದ್ದಾರೆ. ಕಾಂಗ್ರೆಸ್ಸಿಗರು […]