ರಾಷ್ಟ್ರಪತಿ ದ್ರೌಪದಿ ಮುರ್ಮು ಪೌರ ಸನ್ಮಾನಕ್ಕೆ ಹುಬ್ಬಳ್ಳಿಯಲ್ಲಿ ಸಕಲ ಸಿದ್ಧತೆ

ಹುಬ್ಬಳ್ಳಿ,ಸೆ.21- ಇಡೀ ದೇಶಕ್ಕೆ ಶಾಂತಿಯ ಸಂದೇಶ ಸಾರುವ ನಾಡು, ವಾಣಿಜ್ಯ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾದ ಹುಬ್ಬಳ್ಳಿಯಲ್ಲಿ ದೇಶದ ಪ್ರಥಮ ಪ್ರಜೆ ದ್ರೌಪದಿ ಮುರ್ಮು ಅವರನ್ನು ಅಭಿನಂದಿಸಲು ಭರದ ಸಿದ್ಧತೆ ಮಾಡಿಕೊಳ್ಳಲಾಗುತ್ತ್ತಿದೆ.ಸುಮಾರು ಮೂರುವರೆ ದಶಕಗಳ ಬಳಿಕ ರಾಷ್ಟ್ರಪತಿಯವರಿಗೆ ಪೌರಸನ್ಮಾನ ನೀಡುತ್ತಿದ್ದು, ಎರಡನೇ ಬಾರಿಗೆ ರಾಷ್ಟ್ರದ ಪ್ರಥಮ ಪ್ರಜೆಗೆ ಪೌರಸನ್ಮಾನ ಮಾಡುವ ಭಾಗ್ಯವನ್ನು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಪಡೆದುಕೊಂಡಿದೆ ಎಂಬುದು ಹೆಮ್ಮೆ ಮೂಡಿಸಿದೆ. ಸೆ.26ರಂದು ಆಗಮಿಸುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಗೌರವ ಸಲ್ಲಿಸಲು ದೇಶಪಾಂಡೆ ನಗರದ […]

ನೂತನ ರಾಷ್ಟ್ರಪತಿಯವರನ್ನು ಭೇಟಿ ಮಾಡಿದ ಪ್ರಧಾನಿ

ನವದೆಹಲಿ, ಜು.26- ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ರಾಷ್ಟ್ರಪತಿ ಭವನದಲ್ಲಿ ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಶುಭ ಹಾರೈಸಿದರು. ಇತ್ತೀಚೆಗೆ ನಡೆದ ರಾಷ್ಟ್ರಪತಿ ಚುನಾವಣೆಯಲ್ಲಿ ಭರ್ಜರಿ ಬಹುಮತದಿಂದ ಚುನಾಯಿತರಾದ ದ್ರೌಪದಿ ಮುರ್ಮು ಅವರು ನಿನ್ನೆಯಷ್ಟೇ ದೇಶದ ಪ್ರಥಮ ಪ್ರಜೆಯಾಗಿ ಅಧಿಕಾರ ಸ್ವೀಕರಿಸಿದರು. ಅವರನ್ನು ಇಂದು ಬೆಳಗ್ಗೆ ರಾಜಭವನದಲ್ಲಿ ಭೇಟಿ ಮಾಡುವ ಮೂಲಕ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ತಮ್ಮ ಪುತ್ರಿ ಜತೆ ಇಂದು ನೂತನ ರಾಷ್ಟ್ರಪತಿಯವರನ್ನು ಭೇಟಿ […]

ನೂತನ ರಾಷ್ಟ್ರಾಧ್ಯಕ್ಷರಿಗೆ ತವರಿನ ಸೀರೆ ಉಡುಗೊರೆ

ಭುವನೇಶ್ವರ, ಜು.23- ರಾಷ್ಟ್ರಾದ್ಯಕ್ಷರಾಗಿ ನಾಳೆ ಅಧಿಕಾರ ಸ್ವೀಕರಿಸುವ ದ್ರೌಪದಿ ಮುರ್ಮು ಅವರಿಗಾಗಿ ಅತ್ತಿಗೆ ಸಾಂಪ್ರದಾಯಿಕ ಸಂತಾಲಿ ಸೀರೆಯನ್ನು ಉಡುಗೊರೆಯಾಗಿ ತರುತ್ತಿದ್ದು, ಪ್ರಮಾಣ ವಚನ ಸ್ವೀಕಾರದ ವೇಳೆ ಅದನ್ನು ಧರಿಸುವಂತೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ. ದೆಹಲಿಯ ಸಂಸತ್ ಕೇಂದ್ರ ಸಭಾಂಗಣದಲ್ಲಿ ನಡೆಯುವ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ದ್ರೌಪತಿ ಮುರ್ಮ ಅವರಸಹೋದರ ತಾರಿನಿಸೇನ್ ತುಡು ಮತ್ತು ಅವರ ಪತ್ನಿ ಸುಕ್ರಿ ತುಡು ದೆಹಲಿಗೆ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುಕ್ರಿ, ನಾನು ದೀದಿ (ಅಕ್ಕ) ಗಾಗಿ […]

ಮುರ್ಮು ಆಯ್ಕೆ ಖಚಿತ, ಬಿಎಸ್‍ವೈ ವಿಶ್ವಾಸ

ಬೆಂಗಳೂರು,ಜು.18- ರಾಷ್ಟ್ರಪತಿ ಚುನಾವಣೆಯಲ್ಲಿ ಕಣಕ್ಕಿಳಿದಿರುವ ಎನ್‍ಡಿಎ ಬೆಂಬಲಿತ ಬಿಜೆಪಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಮೂರನೇ ಎರಡರಷ್ಟು ಬಹುಮತ ಪಡೆದು ಆಯ್ಕೆಯಾಗುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎನ್‍ಡಿಎ ಮೈತ್ರಿಕೂಟದ ಜೊತೆಗೆ ದ್ರೌಪದಿ ಮುರ್ಮು ಅವರಿಗೆ ಅನೇಕ ಪ್ರಾದೇಶಿಕ ಪಕ್ಷಗಳು ಬೆಂಬಲ ಸೂಚಿಸಿವೆ. ಹೀಗಾಗಿ ಅವರ ಗೆಲುವು ನೂರಕ್ಕೆ ನೂರು ಖಚಿತ ಎಂದು ಹೇಳಿದರು. ಅವರೊಬ್ಬ ಸಮರ್ಥ ಮತ್ತು ದಕ್ಷ ಆಡಳಿತಗಾರರು. ಅಲ್ಲದೆ ಆದಿವಾಸಿ ಸಮುದಾಯಕ್ಕೆ ಸೇರಿದ ಮಹಿಳೆ. […]

ರಾಷ್ಟ್ರಪತಿ ಚುನಾವಣೆ : ಜೆಡಿಎಸ್ ಬೆಂಬಲ ಕೋರಿದ ಶ್ರೀಮತಿ ದ್ರೌಪದಿ ಮುರ್ಮು

ಬೆಂಗಳೂರು: ಎನ್ ಡಿ ಎ ಬೆಂಬಲಿತ ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು ಸಂಜೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಬೆಂಬಲ ಕೋರಿದರು. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕೇಂದ್ರದ ಇನ್ನೋರ್ವ ಸಚಿವ ಕಿಶನ್ ರೆಡ್ಡಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮತ್ತಿತರರ ಜತೆ ದೇವೇಗೌಡರ ನಿವಾಸಕ್ಕೆ ಶ್ರೀಮತಿ ದ್ರೌಪದಿ ಮುರ್ಮು ಅವರು […]