ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಷ್ಟ್ರಪತಿಗಳಿಂದ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ

ಮೈಸೂರು,ಸೆ.26- ಸಾಂಸ್ಕøತಿಕ ನಗರಿ ಮೈಸೂರು ಇಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ವಿಶ್ವ ವಿಖ್ಯಾತವಾದ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2022ಕ್ಕೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಳ್ಳಿ ಪಲ್ಲಕ್ಕಿಯಲ್ಲಿ ಪವಡಿಸಿರುವ ನಾಡದೇವಿ ತಾಯಿ ಶ್ರೀ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಆರತಿ ಬೆಳಗಿ, ಪುಷ್ಪಾರ್ಚನೆಗೈದು ನಮಿಸಿ, ದೀಪ ಬೆಳಗುವ ಮೂಲಕ ವಿದ್ಯುಕ್ತ ಚಾಲನೆ ನೀಡಿದರು. ಬೆಳಿಗ್ಗೆ 9.45ರಿಂದ 10.05ರ ವೃಶ್ಚಿಕ ಲಗ್ನದಲ್ಲಿ ಆರಂಭವಾದ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕ, ವೈಭವಯುತವಾದ ದಸರಾ ಮಹೋತ್ಸವಕ್ಕೆ ಚಾಲನೆ ಲಭಿಸಿತು. ಬಳಿಕ ನಾಡಿನ ಹೆಮ್ಮೆಯ […]

ನಾಳೆ ವಿಶ್ವವಿಖ್ಯಾತ ಮೈಸೂರು ದಸರಾಗೆ ರಾಷ್ಟ್ರಪತಿ ಮುರ್ಮು ಅಧಿಕೃತ ಚಾಲನೆ

ಮೈಸೂರು,ಸೆ.25- ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಳೆ ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಚಾಲನೆ ಸಿಗಲಿದೆ. ಇತಿಹಾಸದಲ್ಲಿಯೇ ಮೊದಲ ಬಾರಿಗೆ ರಾಷ್ಟ್ರಪತಿಯೊಬ್ಬರು ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡುತ್ತಿರುವುದು ಈ ಬಾರಿಯ ವಿಶೇಷವಾಗಿದೆ. ಚಾಮುಂಡಿಬೆಟ್ಟದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು 9.45ರಿಂದ 10.05ರೊಳಗೆ ಸಲ್ಲುವ ವೃಶ್ಚಿಕ ಲಗ್ನದಲ್ಲಿ ಬೆಳ್ಳಿ ರಥದಲ್ಲಿ ಪ್ರತಿಷ್ಠಾಪಿಸಲಾಗುವ ನಾಡದೇವಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಹತ್ತು ದಿನಗಳ ದಸರಾ ಉತ್ಸವಕ್ಕೆ ಅಧಿಕೃತ ಚಾಲನೆ ನೀಡಲಿದ್ದಾರೆ. ನಾಳೆ ಬೆಳಿಗ್ಗೆ 9ಗಂಟೆಗೆ ವಿಶೇಷ ವಿಮಾನದಲ್ಲಿ ಮೈಸೂರಿನ ಮಂಡಕಳ್ಳಿ […]

ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಮೊದಲ ಭಾಷಣದ ಹೈಲೈಟ್ಸ್

ನವದೆಹಲಿ, ಜು.25- ದೇಶದ ಉನ್ನತ ಸಾಂವಿಧಾನಿಕ ಸ್ಥಾನಕ್ಕೆ ಆಯ್ಕೆಯಾಗಿರುವುದು ಆಕೆಯ ವೈಯಕ್ತಿಕ ಸಾಧನೆಯಲ್ಲ ಬದಲಾಗಿ ಭಾರತದ ಪ್ರತಿಯೊಬ್ಬ ಬಡವರ ಸಾಧನೆಯಾಗಿದೆ ಎಂದು ಅಧ್ಯಕ್ಷೆ ದ್ರೌಪದಿ ಮುರ್ಮು ಹೇಳಿದ್ದಾರೆ. ಭಾರತದ 15 ನೇ ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ 64 ವರ್ಷದ ಮುರ್ಮು ಅವರು ತಮ್ಮ ಸ್ವೀಕಾರ ಭಾಷಣದಲ್ಲಿ, ದೇಶದ ವಂಚಿತರು, ಬಡವರು, ದಲಿತರು ಮತ್ತು ಬುಡಕಟ್ಟು ಜನರು ತಮ್ಮ ಪ್ರತಿಬಿಂಬವನ್ನು ತಮ್ಮಲ್ಲಿ ನೋಡಬಹುದು, ಇದು ತನಗೆ ದೊಡ್ಡ ತೃಪ್ತಿಯ ವಿಷಯವಾಗಿದೆ ಎಂದರು. ಸಬ್ ಕಾ ಪ್ರಯಾಸ್ (ಎಲ್ಲರ […]

BIG NEWS : ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅಧಿಕಾರ ಸ್ವೀಕಾರ

ನವದೆಹಲಿ, ಜು.25- ವಿಶ್ವದ ದೊಡ್ಡ ಪ್ರಜಾಪ್ರಭುತ್ವದ ರಾಷ್ಟ್ರವಾದ ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪತಿ ಮುರ್ಮು ಇಂದು ಪ್ರಮಾಣ ಸ್ವೀಕರಿಸಿದರು. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ದೇಶದ ಪ್ರಥಮ ಪ್ರಜೆಯಾಗಿ ಭರ್ಜರಿ ಬಹುಮತದಿಂದ ಆಯ್ಕೆಯಾದ ದ್ರೌಪತಿ ಮುರ್ಮು ಅವರಿಗೆ ಇಂದು ಸಂಸತ್‍ನ ಸೆಂಟ್ರಲ್ ಹಾಲ್‍ನಲ್ಲಿ ನಡೆದ ಸಮಾರಂಭದಲ್ಲಿ ಸುಪ್ರಿಂಕೋರ್ಟ್‍ನ ಮುಖ್ಯನ್ಯಾಯ ಮೂರ್ತಿ ಎನ್.ವಿ.ರಮಣ ಅಧಿಕಾರ ಗೌಪ್ಯತಾ ಪ್ರಮಾಣ ವಚನ ಬೋಸಿದರು. ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್, ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಎಂ.ವೆಂಕಯ್ಯ ನ್ಯಾಯ್ಡು, […]

ರಾಷ್ಟ್ರಪತಿಯಗಿ ದ್ರೌಪದಿ ಮುರ್ಮು ನಾಳೆ ಪ್ರಮಾಣವಚನ ಸ್ವೀಕಾರ

ನವದೆಹಲಿ, ಜು.24- ದೇಶದ ಅತ್ಯುನ್ನತ ಹುದ್ದೆಯ್ದಾ ರಾಷ್ಟ್ರಧ್ಯಕ್ಷರಾಗಿ ದ್ರೌಪದಿ ಮುರ್ಮ ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಂಸತ್ತಿನ ಸೆಂಟ್ರಲ್ ಹಾಲ್‍ನಲ್ಲಿ ಸೋಮವಾರ ಬೆಳಗ್ಗೆ 10.15ಕ್ಕೆ ಸಮಾರಂಭ ನಡೆಯಲಿದ್ದು, ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೂತನ ರಾಷ್ಟ್ರಾಧ್ಯಕ್ಷರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ರಾಷ್ಟ್ರಪತಿಯವರು 21 ಗನ್ ಸೆಲ್ಯೂಟ್ ಸ್ವೀಕರಿಸಿದ ಬಳಿಕ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಂತರ ಭಾಷಣ ಮಾಡಲಿದ್ದಾರೆ. ಸಮಾರಂಭಕ್ಕೂ ಮೊದಲು ನಿರ್ಗಮಿತ ಅಧ್ಯಕ್ಷರು ಮತ್ತು ನೂತನ ಅಧ್ಯಕ್ಷರು ವಿಧ್ಯುಕ್ತ ಮೆರವಣಿಗೆಯಲ್ಲಿ ಸಂಸತ್ತಿಗೆ […]