3 ಪ್ರತ್ಯೇಕ ಮಾದಕ ವಸ್ತು ಮಾರಾಟ ಪ್ರಕರಣ, ನಾಲ್ವರ ಬಂಧನ, 19 ಕೆಜಿ ಗಾಂಜಾ ವಶ

ಬೆಂಗಳೂರು,ಫೆ.12- ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಮೂರು ಪ್ರಕರಣಗಳಲ್ಲಿ ಪಶ್ಚಿಮ ವಿಭಾಗದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ 19 ಕೆಜಿ ತೂಕದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಕೆಂಗೇರಿ: ಆಂಧ್ರ ಪ್ರದೇಶದಿಂದ ಗಾಂಜಾ ತರಿಸಿಕೊಂಡು ಮಾರಾಟ ಮಾಡುತ್ತಿದ್ದ ಸುನೀಲ್ ಎಂಬಾತನನ್ನು ಬಂಧಿಸಿರುವ ಪೊಲೀಸರು 10 ಕೆಜಿ 200 ಗ್ರಾಂ ಗಾಂಜಾ, 500ರೂ. ಹಣ ಹಾಗೂ ಕೃತ್ಯಕ್ಕೆ ಬಳಸಿದ್ದ ಆಟೋರಿಕ್ಷಾವನ್ನು ವಶಪಡಿಸಿಕೊಂಡಿ ದ್ದಾರೆ. ಫೆ.7ರಂದು ಬೆಳಗ್ಗೆ ಸಿಬ್ಬಂದಿ ಗಸ್ತು ಮಾಡು ತ್ತಿದ್ದಾಗ ಮಾದಕ ವಸ್ತು ಗಾಂಜಾ ಮಾರಾಟ ಮಾಡು ತ್ತಿ […]