ಮದ್ಯಪಾನ ಮಾಡಿ ವಾಹನ ಚಾಲನೆ : 146 ಪ್ರಕರಣ ದಾಖಲು

ಬೆಂಗಳೂರು,ಡಿ.24- ನಗರದಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಗ್ಗಿಸುವ ನಿಟ್ಟಿನಲ್ಲಿ ಸಂಚಾರಿ ಪೊಲೀಸರು ನಿನ್ನೆ ರಾತ್ರಿ ವಿಶೇಷ ಕಾರ್ಯಾಚರಣೆ ಹಮ್ಮಿಕೊಂಡು ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ 146 ಪ್ರಕರಣಗಳನ್ನು ದಾಖಲಿಸಿದ್ದಾರೆ. ನಗರದಲ್ಲಿ ವಾಹನ ಸವಾರರು ಮದ್ಯಪಾನ ಮಾಡಿ ವಾಹನ ಚಲಾಯಿಸುವುದರಿಂದ ಮಾರಣಾಂತಿಕ ಅಪಘಾತಗಳು ಸಂಭವಿಸುವ ಸಾಧ್ಯತೆ ಗಣನೀಯವಾಗಿ ಹೆಚ್ಚುತ್ತಿರುವುದು ಆತಂಕಕ್ಕೀಡು ಮಾಡಿದೆ. ಈ ಪಿಡುಗನ್ನು ಪರಿಣಾಮಕಾರಿಯಾಗಿ ಹತ್ತಿಕ್ಕುವ ಅಗತ್ಯವಿದ್ದು, ಅಪಘಾತಗಳನ್ನು ತಡೆಯುವುದು ಹಾಗೂ ರಸ್ತೆ ಬಳಕೆದಾರರ ಸುರಕ್ಷತೆಯನ್ನು ಕಾಪಾಡುವುದು ಸಂಚಾರಿ ಪೊಲೀಸರ ಮೂಲಭೂತ ಕರ್ತವ್ಯ ಹಾಗೂ ಮೊದಲ […]