ವಿವಿಗಳಲ್ಲಿ ಇ-ಆಫೀಸ್ ಕಡ್ಡಾಯ : ಮಾರ್ಚ್ 1ರ ಗಡುವು ವಿಧಿಸಿದ ಸಚಿವ ಅಶ್ವತ್ಥನಾರಾಯಣ

ಬೆಂಗಳೂರು,ಫೆ.25- ರಾಜ್ಯದ ಎಲ್ಲ ಸರ್ಕಾರಿ ವಿಶ್ವವಿದ್ಯಾಲಯಗಳು ಮಾರ್ಚ್ 1ರಿಂದ ತನ್ನ ಎಲ್ಲ ಕಡತಗಳನ್ನು ಇ- ಕಚೇರಿ ಮೂಲಕವೇ ಅನ್ ಲೈನ್ ನಲ್ಲಿ ಕಳುಹಿಸುವುದನ್ನು ಕಡ್ಡಾಯ ಮಾಡಲಾಗಿದೆ. ಈ ಗಡುವಿನ ನಂತರ ಭೌತಿಕವಾಗಿ ಬರುವ ಎಲ್ಲ ಕಡತಗಳನ್ನು ವಾಪಸ್ ಕಳುಹಿಸುವಂತೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಬಗ್ಗೆ ತಮ್ಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು, ಇ-ಆಫೀಸ್ ತಂತ್ರಾಂಶದ ಮೂಲಕವೇ ಕಡತಗಳನ್ನು ಕಳುಹಿಸಲು ವಿ.ವಿ.ಗಳಿಗೆ ಈ ಹಿಂದೆಯೇ ಸೂಚಿಸಿತ್ತು. ಆದರೂ […]