ಇ-ಸಹಮತಿ ತಂತ್ರಾಂಶ ಸೇವೆಗೆ ಸಚಿವ ಅಶ್ವತ್ಥನಾರಾಯಣ ಚಾಲನೆ

ಬೆಂಗಳೂರು,ಜ.24-ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ಪರೀಕ್ಷಾ ಚಟುವಟಿಕೆಯ ಇ-ಸಹಮತಿ ತಂತ್ರಾಂಶ ಸೇವೆಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ ಚಾಲನೆ ನೀಡಿದರು. ಉನ್ನತ ಶಿಕ್ಷಣ ಇಲಾಖೆ ಹಾಗೂ ಇ-ಆಡಳಿತ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಂತರ ಮಾತನಾಡಿದರು. ಪದವಿ ಪೂರ್ವ ಪರೀಕ್ಷಾ ಮಂಡಳಿ, ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಅಂಕಪಟ್ಟಿ ಮತ್ತು ಪ್ರಮಾಣ ಪತ್ರಗಳನ್ನು ಎನ್‍ಎಡಿ ಸಹಯೋಗದೊಂದಿಗೆ ಇ-ಸಹಮತಿ ತಂತ್ರಾಂಶದ ಮೂಲಕ ಪಡೆಯಬಹುದಾಗಿದೆ. ಯಾವುದೇ ವಿದ್ಯಾರ್ಥಿ ಡಿಜಿಲಾಕರ್‍ನ್ನು ಡೌನ್‍ಲೋಡ್ ಮಾಡಿಕೊಂಡು ಬಳಸಬಹುದಾಗಿದೆ. ಇದರಿಂದ […]