ನರಭಕ್ಷಕ ಚಿರತೆಗೆ ಮೇಕೆ, ಹಸುಗಳು ಬಲಿ

ಹನೂರು, ಅ.21- ನರ ಭಕ್ಷಕ ಚಿರತೆ ಬಾಯಿಗೆ 5 ಮೇಕೆಗಳು ಮತ್ತು ಒಂದು ಹಸು ಬಲಿ ಆಗಿರುವ ಘಟನೆ ಮಹದೇಶ್ವರಬೆಟ್ಟ ವನ್ಯಜೀವಿ ವಲಯ ವ್ಯಾಪ್ತಿಯ ಮಲ್ಲಯ್ಯಪುರ ಗ್ರಾಮದ ಅರಣ್ಯದಲ್ಲಿ ಜರುಗಿದೆ. ತಾಲೂಕಿನ ಕೌದಳ್ಳಿ ಗ್ರಾ. ಪಂ.ವ್ಯಾಪ್ತಿಗೆ ಸೇರಿದ ಮಲ್ಲಯ್ಯ ಪುರ ಗ್ರಾಮದ ಕುಮಾರ್ ಎಂಬುವವರಿಗೆ ಸೇರಿದ ಐದು ಮೇಕೆಗಳು ಮತ್ತು ಪುದು ನಗರ ಗ್ರಾಮದ ರಾಮಚಂದ್ರನಾಯ್ಕ ಎಂಬುವವರ ಸುಮಾರು 25 ಸಾವಿರಕ್ಕೂ ಹೆಚ್ಚು ಬೆಲೆ ಬಾಳುವ ಹಸು(ಕಡಸು)ನ್ನು ಕೊಂದು ಅವುಗಳ ರಕ್ತ ಕುಡಿದು ಮಾಂಸ ತಿಂದು ಹೋಗಿರುತ್ತದೆ. […]
ವಿಷ ಆಹಾರ ಸೇವಿಸಿ 30 ಮಕ್ಕಳು ಅಸ್ವಸ್ಥ
ಮದ್ದೂರು,ಸೆ.17- ತಾಲೂಕಿನ ಅಂಬರಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಹಲ್ಲಿ ಬಿದ್ದ ಆಹಾರ ಸೇವನೆ ಮಾಡಿ 30 ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಶಾಲೆಯಲ್ಲಿ ಒಟ್ಟು 53 ವಿದ್ಯಾರ್ಥಿಗಳಿದ್ದು, 48 ಮಕ್ಕಳು ಶಾಲೆಗೆ ಹಾಜರಾಗಿದ್ದರು. ಮಧ್ಯಾಹ್ನದ ಬಿಸಿಯೂಟದ ಸಾಂಬಾರಿಗೆ ಹಲ್ಲಿ ಬಿದ್ದಿದ್ದು, ಮಕ್ಕಳು ಊಟದ ತಟ್ಟೆಯಲ್ಲಿ ಹಲ್ಲಿಯ ತುಂಡುಗಳು ಕಾಣಿಸಿಕೊಂಡು ಶಿಕ್ಷಕರಿಗೆ ತಿಳಿಸಿದಾಗ ಮುಖ್ಯ ಶಿಕ್ಷಕಿ ಲಕ್ಷ್ಮೀ ಮಕ್ಕಳು ಊಟ ಮಾಡದಂತೆ ತಡೆದು ತಕ್ಷಣ ಮಕ್ಕಳಿಗೆ ಉಪ್ಪಿನ ನೀರನ್ನು ಕುಡಿಸಿ ವಾಂತಿ ಮಾಡಿಸಿದ್ದಾರೆ. ನಂತರ ಮಕ್ಕಳಲ್ಲಿ ವಾಂತಿ […]
ಮಾಂಸ ತಿಂದು ದೇವಸ್ಥಾನಕ್ಕೆ ಬಂದ ಸಿದ್ದರಾಮಯ್ಯ, ಮತ್ತೊಂದು ವಿವಾದ
ಬೆಂಗಳೂರು,ಆ.21- ಮಾಂಸಹಾರ ಸೇವಿಸಿ ಸಿದ್ದರಾಮಯ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎಂಬ ಮತ್ತೊಂದು ವಿವಾದ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚೆಗೆ ಮಡಿಕೇರಿಗೆ ನೆರೆ ಸಂಕಷ್ಟಗಳನ್ನು ವೀಕ್ಷಿಸಲು ಸಿದ್ದರಾಮಯ್ಯ ಭೇಟಿ ನೀಡಿದ್ದರು. ಆ ವೇಳೆ ವಿಧಾನಪರಿಷತ್‍ನ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ ಅವರ ಮನೆಯಲ್ಲಿ ಸಿದ್ದರಾಮಯ್ಯ ಮತ್ತು ಇತರ ಮುಖಂಡರು ಊಟ ಮಾಡಿದ್ದರು. ಸಂಜೆ ಕೊಡ್ಲಿಪೇಟೆಯ ಬಸವೇಶ್ವರ ದೇವಸ್ಥಾನಕ್ಕೆ ಸಿದ್ದರಾಮಯ್ಯ ಭೇಟಿ ನೀಡಿದ್ದರು. ಮಾಂಸಾಹಾರ ಊಟ ಮಾಡಿ ಸಿದ್ದರಾಮಯ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಇದು ತೀವ್ರ ಚರ್ಚೆಗೂ ಗ್ರಾಸವಾಗಿದೆ. […]