ಕಾಂಗ್ರೆಸ್ ಭಾರಿ ಪ್ರತಿಭಟನೆ : ಬ್ಯಾರಿಕೇಡ್ ಹಾರಿದ ಡಿಕೆಶಿ, ಎಲ್ಲಾ ನಾಯಕರು ಪೊಲೀಸ್ ವಶಕ್ಕೆ

ಬೆಂಗಳೂರು, ಜು.21- ಕೇಂದ್ರ ತನಿಖಾ ಸಂಸ್ಥೆ ಜಾರಿ ನಿರ್ದೇಶನಾಲಯದಿಂದ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಅವರ ವಿಚಾರಣೆಯನ್ನು ವಿರೋಧಿಸಿ ರಾಜ್ಯ ಕಾಂಗ್ರೆಸ್ ನಾಯಕರು ನಗರದಲ್ಲಿಂದು ರಾಜಭವನ ಚಲೋ ನಡೆಸಿದರು. ನಗರದ ಫ್ರೀಡಂ ಪಾರ್ಕ್‍ನಲ್ಲಿ ಸಮಾವೇಶಗೊಂಡಿದ್ದ ಮುಖಂಡರು ಮತ್ತು ಕಾರ್ಯಕರ್ತರು ಅಲ್ಲಿಂದ ರಾಜಭವನದತ್ತ ಪಾದಯಾತ್ರೆ ನಡೆಸಿದರು. ನೃಪತುಂಗ ರಸ್ತೆಯಿಂದ ಅರಮನೆ ರಸ್ತೆಯತ್ತ ನಡೆದ ಕಾಂಗ್ರೆಸ್ ರ್ಯಾಲಿಯನ್ನು ಪೊಲೀಸರು ತಡೆದರು. ಈ ಸಂದರ್ಭದಲ್ಲಿ ಪೊಲೀಸರು ಮತ್ತು ಕಾಂಗ್ರೆಸ್ ನಾಯಕರ ನಡುವೆ ಮಾತಿನ ಚಕಮಕಿ ನಡೆಯಿತು. ಬಿಜೆಪಿ ಮತ್ತು ಪ್ರಧಾನಿ ನರೇದ್ರ […]