ಶಾಲೆಗಳ ಪುನರಾರಂಭ ಕುರಿತು ಶುಕ್ರವಾರ ತೀರ್ಮಾನ : ಸಚಿವ ಬಿ.ಸಿ.ನಾಗೇಶ್

ಬೆಂಗಳೂರು,ಜ.19-ಕೋವಿಡ್ ಹೆಚ್ಚಳದಿಂದ ಬೆಂಗಳೂರು ಸೇರಿದಂತೆ ಮತ್ತಿತರ ಕಡೆ ಮುಚ್ಚಲ್ಪಟ್ಟಿದ್ದ ಶಾಲೆಗಳನ್ನು ಪುನರಾರಂಭಿಸುವ ಕುರಿತು ಶುಕ್ರವಾರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ದಿನಗಳ ಹಿಂದೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಶಾಲೆಗಳನ್ನು ಬಂದ್ ಮಾಡಲಾಗಿತ್ತು. ವಿದ್ಯಾರ್ಥಿಗಳಿಗೆ ಸೋಂಕು ತಗುಲಬಹುದೆಂಬ ಕಾರಣಕ್ಕಾಗಿ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿತ್ತು ಎಂದರು. ಈಗ ಮುಚ್ಚಲ್ಪಟ್ಟಿರುವ ಶಾಲೆಗಳನ್ನು ಪುನರಾರಂಭಿಸುವ ಬಗ್ಗೆ ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಹತ್ವದ […]